ಪುತ್ತೂರು: ಸಂವಿಧಾನದ ಆಶಯ, ನಿಯಮಾವಳಿಗಳನ್ನು ಉಲ್ಲಂಘನೆ ಮಾಡುವುದು ಸರಿಯಲ್ಲ. ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಾಜಿ ಶಾಸಕ ಸಂಜೀವ ಮಠಂದೂರು ಶುಭ ಹಾರೈಸಿದರು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ ಮಾತನಾಡಿ ಪತ್ರಕರ್ತರು ಸಮಾಜದ ಪ್ರತಿಯೊಂದು ಸಮಸ್ಯೆಗೂ ಧ್ವನಿಯಾಗುತ್ತಾರೆ. ಪತ್ರಕರ್ತರಿಗೆ ಸಮಸ್ಯೆ ಉಂಟಾದಾಗ ಸಮಾಜವೇ ಅವರ ರಕ್ಷಣೆಗೆ ನಿಲ್ಲಬೇಕು ಎಂದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ಮಾತನಾಡಿ, ಮಾಧ್ಯಮಗಳು ಸತ್ಯವನ್ನು ಸಮಾಜಕ್ಕೆ ತಿಳಿಸುವ ಕೆಲಸ ಮಾಡುತ್ತಾ ಬಂದಿವೆ. ಸರ್ಕಾರಿ ನೌಕರರ ಸೇವೆಯಂತೆ ಮಾಧ್ಯಮಗಳ ಸೇವೆಯೂ ಅತ್ಯಂತ ಪ್ರಮುಖವಾದುದು ಎಂದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭೆಯ ಅಧ್ಯಕ್ಷತೆ ವಹಿಸಿದ್ದರು ಹಾಗೂ ಪುತ್ತೂರು ಸಂಘದ ನೂತನ ಆಡಳಿತ ಮಂಡಳಿ ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಶುಭ ಹಾರೈಸಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಸಿದ್ದಿಕ್ ನೀರಾಜೆ ಅನಿಸಿಕೆ ವ್ಯಕ್ತಪಡಿಸಿದರು.
ಸಂಘದ ನೂತನ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ವಂದಿಸಿದರು. ಕೋಶಾಧಿಕಾರಿ ಸಂಸುದ್ದೀನ್ ಸಂಪ್ಯ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷರಾದ ಕರುಣಾಕರ ರೈ ಸಿ.ಎಚ್., ಎಂ.ಎಸ್. ಭಟ್, ಕಾರ್ಯದರ್ಶಿಗಳಾದ ಅಜಿತ್ ಕುಮಾರ್, ನಝೀರ್ ಕೊಯಿಲ, ಕಾರ್ಯಕಾರಿ ಸಮಿತಿ ಸದಸ್ಯರಾದ ಮೇಘ ಪಾಲೆತ್ತಾಡಿ, ಶಶಿಧರ ರೈ ಕುತ್ಯಾಳ, ಶೇಖ್ ಜೈನುದ್ದೀನ್, ಉಮಾಶಂಕರ್, ಲೋಕೇಶ್ ಬನ್ನೂರು, ಕೃಷ್ಣ ಪ್ರಸಾದ್, ರಾಜೇಶ್ ಪಟ್ಟೆ, ಶರತ್ ಕುಮಾರ್ ಸಹಕರಿಸಿದರು.ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಅನಿಲ್ ಕುಮಾರ್ ಭೂಮಾ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ಸೈಬರ್ ಮತ್ತು ಇತರ ಅಪರಾಧ ಚಟುವಟಿಕೆಗಳ ನಿಯಂತ್ರಣದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ವಂದಿಸಿದರು. ಖಜಾಂಚಿ ಸಂಶುದ್ಧೀನ್ ಸಂಪ್ಯ ನಿರೂಪಿಸಿದರು.