ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಪುತ್ತೂರು
ಚುನಾವಣೆ ಸುಸೂತ್ರವಾಗಿ ನಡೆಯಲು ಎಲ್ಲ ಇಲಾಖಾಧಿಕಾರಿಗಳ ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ಹೇಳಿದರು.
ಅವರು ಗುರುವಾರ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ತಾ.ಪಂ. ಸಹಾಯಕ ನಿರ್ದೇಶಕಕಿ ಶೈಲಜಾ ಭಟ್ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂ. ಸಿಬ್ಬಂದಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.