ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡಿ: ಜಯಂತ್ ನಡುಬೈಲು

KannadaprabhaNewsNetwork |  
Published : Jun 01, 2026, 02:30 AM IST
ಅಕ್ಷಯ | Kannada Prabha

ಸಾರಾಂಶ

ಅಕ್ಷಯ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿಪೂರ್ವ ಕಾಲೇಜು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಆರಂಭ ‘ಆರೋರಾ’ ಕಾರ್ಯಕ್ರಮ ನಡೆಯಿತು.

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿಪೂರ್ವ ಕಾಲೇಜು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಆರಂಭ ‘ಆರೋರಾ’ ಕಾರ್ಯಕ್ರಮ ನಡೆಯಿತು. ಅಕ್ಷಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು ಅಧ್ಯಕ್ಷತೆ ವಹಿಸಿದ್ದರು.

ಪೋಷಕರು ಮಕ್ಕಳಿಗಾಗಿ ಸಂಪತ್ತು ಮಾಡುವ ಬದಲಾಗಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ ಅವರನ್ನೇ ಸಂಪತ್ತನಾಗಿ ರೂಪಿಸುವ ಜವಾಬ್ದಾರಿ ಪೋಷಕರು, ಶಿಕ್ಷಕರು ಹಾಗೂ ಸಂಸ್ಥೆಯ ಮೇಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದಯೋನ್ಮುಖ ಯುವ ಪ್ರತಿಭೆ ಕನಿಷ್ಕ ಮನೋಜ್ ಕರ್ಕೇರ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ನಾವು ಜೀವನದಲ್ಲಿ ಉನ್ನತ ಸ್ಥಾನ ಏರಲು ಸಾಧ್ಯ ಎಂದು ಹೇಳಿದರು. ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಕಾಲೇಜಿನಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿರುವ ಕೋರ್ಸ್ ಗಳು ಮತ್ತು ಅವಕಾಶಗಳ ಬಗ್ಗೆ ತಿಳಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಅವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಅಂಕಗಳ ಜೊತೆ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡರೆ ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದರು.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗರತ್ನ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತಿ. ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಸ್ಥಾಪಕರಾದ ಜಯಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕರಾದ ಭೂಮಿಕ ಬಿ.ವಿ. ಸ್ವಾಗತಿಸಿ, ನವನೀತ ಎಂ. ವಂದಿಸಿ, ಪರಿಮಳ ರಾವ್ ನಿರೂಪಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿರ್ದೇಶಕ ಅಭಿಲಾಶ್ ಕ್ಷತ್ರಿ ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಏವಿಯೇಷನ್ ಟ್ರೈನರ್ ಜಯಶ್ರೀ ಅವರು ಓರಿಯಂಟೇಶನ್ ಕಾರ್ಯಕ್ರಮ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುದುರೆಮುಖ ಚಾರಣಕ್ಕೆ ಅವಕಾಶ, ಇಂದಿನಿಂದ ಅಧಿಕೃತ ಅನುಮತಿ
ಬನ್ನಡ್ಕ ಕಾಲೇಜು ವಾರ್ಷಿಕೋತ್ಸವ