ಅ.ಭಾ. ತುಳು ಒಕ್ಕೂಟ ನಿಯೋಗ ಪುತ್ತೂರು ಶಾಸಕರ ಬೇಟಿ

KannadaprabhaNewsNetwork |  
Published : Sep 12, 2026, 03:00 AM IST
ಶಾಸಕ | Kannada Prabha

ಸಾರಾಂಶ

ಅಖಿಲ ಭಾರತ ತುಳು ಒಕ್ಕೂಟ ನಿಯೋಗ ಇಂದು ಪುತ್ತೂರು ಶಾಸಕರಾದ ಅಶೋಕ ಕುಮಾರ್ ರೈ ಕೋಡಿಂಬಾಡಿ ಅವರನ್ನು ಬೇಟಿ ಮಾಡಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಮುಖ್ಯಮಂತ್ರಿಗಳಿಗೆ ಒತ್ತಡ ಹೇರಬೇಕೆಂದು ಒತ್ತಾಯಿಸಲಾಯಿತು.

ಪುತ್ತೂರು: ಅಖಿಲ ಭಾರತ ತುಳು ಒಕ್ಕೂಟ ನಿಯೋಗ ಇಂದು ಪುತ್ತೂರು ಶಾಸಕರಾದ ಅಶೋಕ ಕುಮಾರ್ ರೈ ಕೋಡಿಂಬಾಡಿ ಅವರನ್ನು ಬೇಟಿ ಮಾಡಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಮುಖ್ಯಮಂತ್ರಿಗಳಿಗೆ ಒತ್ತಡ ಹೇರಬೇಕೆಂದು ಒತ್ತಾಯಿಸಲಾಯಿತು. ತುಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದೂ ಸ್ವತಂತ್ರ ಲಿಪಿ ಕೂಡ ಇದ್ಧು ಪಂಚದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯು ಸಂಪದ್ಬರಿತ ಶ್ರೇಷ್ಠ ಭಾಷೆಯಾಗಿದೆ ಎಂದು ಶಾಸಕರಲ್ಲಿ ಚರ್ಚಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕರು ನಾನು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು ತುಳುವರ ಬಹುಕಾಲದ ಕನಸು ನನಸಾಗುವ ದಿನ ಹತ್ತಿರದಲ್ಲಿದೆ ಎಂದರು. ತುಳು ನಿಯೋಗದಲ್ಲಿ ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ. ಭಂಡಾರಿ, ಪ್ರಧಾನ ಕಾರ್ಯದರ್ಶಿ ಪಿ. ಎ. ಪೂಜಾರಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ತುಳು ಒಕ್ಕೂಟದ ಸದಸ್ಯರಾದ ತಾರಾನಾಥ್ ಶೆಟ್ಟಿ ಬೋಳಾರ, ಹರಿಣಾಕ್ಷಿ ಜೆ. ಶೆಟ್ಟಿ, ವಿಜಯ ಕುಮಾರ್ ಭಂಡಾರಿ ಹೆಬ್ಬಾರಬೈಲ್, ಜಿ.ವಿ.ಎಸ್. ಉಳ್ಳಾಲ್, ದ.ಕ. ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರು ಪ್ರದೀಪ್ ಕುಮಾರ್ ಕಲ್ಕೂರ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಪೀಡಿತ ತಾಲೂಕು ಘೋಷಣೆ ಶೇ.200 ಖಚಿತ: ನಾಡಗೌಡ
ನನಸಾಗದ ಡಾ.ಅಂಬೇಡ್ಕರ್ ಭವನ ಕನಸು।