೮ ಕೋಟಿ ಅನುದಾನ ಮಂಜೂರು ಶಾಸಕ ಅಶೋಕ್ ರೈ

KannadaprabhaNewsNetwork |  
Published : Feb 15, 2026, 04:15 AM IST
ಅಶೋಕ್ ರೈ | Kannada Prabha

ಸಾರಾಂಶ

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ೮ ಕೋಟಿ ರು. ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ೮ ಕೋಟಿ ರು. ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಪಥವಾಗಿ ಅಭಿವೃದ್ದಿ ಹೊಂದುತ್ತಿದ್ದು ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದ್ದು, ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಹಾರಾಡಿಯಲ್ಲಿ ಕಿರಿದಾದ ರೈಲ್ವೇ ಸೇತುವೆಯು ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಮಾಡುವ ಬಗ್ಗೆ ಅನುದಾನ ಕೋರಿ ಶಾಸಕರು ಮನವಿ ಮಾಡಿದ್ದರು. ಲೋಕೋಪಯೋಗಿ ಇಲಾಖೆಯಿಂದ ೮ ಕೋಟಿ ರು. ಅನುದಾನ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿಯೂ ಪ್ರಾರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಫಥವಾಗಿ ಅಭಿವೃದ್ದಿ ಹೊಂದುತ್ತಿದೆ. ಈ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೆ ಸೇತುವೆ ಅಗಲ ಕಿರಿದಾಗಿರುವ ಕಾರಣ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಕೆಲ ತಿಂಗಳ ಹಿಂದೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಕರೆಸಿ ಸೇತುವೆಯ ವೀಕ್ಷಣೆ ಮಾಡಿಸಿದ್ದೆ. ಹೊಸ ಸೇತುವೆ ನಿರ್ಮಾಣಕ್ಕೆ ೮ ಕೋಟಿ ರು. ಅನುದಾನ ಮಂಜೂರಾಗಿದೆ.ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಪುತ್ತೂರಿನ ಅಭಿವೃದ್ದಿಗೆ ಇದೊಂದು ಮೈಲಿಗಲ್ಲು ಆಗಲಿದೆ.ಅಶೋಕ್ ರೈ ಶಾಸಕರು ಪುತ್ತೂರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ