ನಮ್ಮಲ್ಲಿರುವ ತಪ್ಪುಗಳನ್ನು ತೊಡೆದು ಹಾಕುವುದೇ ಆಧ್ಯಾತ್ಮ: ಪ್ರೊ. ನಂದನ್ ಪ್ರಭು

KannadaprabhaNewsNetwork |  
Published : Nov 19, 2026, 02:45 AM IST
ಫೋಟೋ: 17ಪಿಟಿಆರ್‌-ವಿವೇಕ ಸ್ಮೃತಿವಿವೇಕಾನಂದ ಕಾಲೇಜ್‌ನಲ್ಲಿ ವಿವೇಕ ಸ್ಮೃತಿ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ ಸಂಚಿಕೆ-34’ ಕಾರ್ಯಕ್ರಮ

ಪುತ್ತೂರು: ನಮ್ಮಲ್ಲಿರುವ ತಪ್ಪು ವಿಚಾರವನ್ನು ತೊಡೆದು ಹಾಕುವುದೇ ಆಧ್ಯಾತ್ಮವಾಗಿದೆ. ತರ್ಕದ ಭಾಷೆಯಲ್ಲಿ ಆಧ್ಯಾತ್ಮವನ್ನು ಜಗತ್ತಿನ ಮುಂದಿಡಬೇಕು. ಆಗ ಜಗತ್ತಿಗೆ ಅಧ್ಯಾತ್ಮದ ಸಾರ ಪ್ರಕಟವಾಗುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾಮಿ ವಿವೇಕಾನಂದರ ಕೊಡುಗೆ ಅಪಾರ. ವಿಜ್ಞಾನ ಕ್ಷೇತ್ರದಲ್ಲಿ ಸದಾ ಹೊಸ ಅನ್ವೇಷಣೆಗಳು ನಡೆಯುತ್ತವೆ. ಅಂತೆಯೇ ಜಗತ್ತಿನಲ್ಲಿ ಬರುವಂತಹ ವಿನೂತನ ವಿಚಾರವನ್ನು ನಮ್ಮ ಕಲಿಕೆಯಲ್ಲೂ ಅಳವಡಿಸಿಕೊಳ್ಳಬಹುದು. ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಜೊತೆಗೆ ನಮ್ಮ ಹೊಸ ಆಲೋಚನೆಗಳನ್ನು ಬಳಸಿಕೊಳ್ಳುವುದರ ಮೂಲಕ ಬದಲಾವಣೆ ತರಲು ಸಾಧ್ಯ ಎಂದು ಮಣಿಪಾಲದ ಟಿಎಪಿಎಂಐ ನ ಪ್ರೊ. ನಂದನ್ ಪ್ರಭು ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ ಸಂಚಿಕೆ-34’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ನಿರ್ದೇಶಕಿ ವೇದ ಲಕ್ಷ್ಮೀಕಾಂತ ಆಚಾರ್ಯ ಮಾತನಾಡಿ, ವಿವೇಕಾನಂದರು ಕೇವಲ ಆಧ್ಯಾತ್ಮಿಕ ಗುರುಗಳಾಗಿರದೆ, ಜಗತ್ತಿಗೆ ಭಾರತದ ಸಂಸ್ಕೃತಿ, ಆಧ್ಯಾತ್ಮಿಕ ಶಕ್ತಿ ಜೊತೆಗೆ ಮಾನವೀಯತೆಯನ್ನು ಪರಿಚಯಿಸಿದವರು. ಯುವ ಜನತೆ ದೇಶದ ಶಕ್ತಿ ಎನ್ನುವುದು ವಿವೇಕಾನಂದರ ನಂಬಿಕೆಯಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಜೀವನವನ್ನು ಬೆಳೆಸಿಕೊಳ್ಳುವುದರೊಂದಿಗೆ ದೇಶಕ್ಕೆ ತಮ್ಮಿಂದಾಗುವ ಸಹಾಯವನ್ನು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ವರದರಾಜ್ ಚಂದ್ರಗಿರಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ಕಾಲೇಜಿನ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್, ವಿವೇಕಾನಂದ ಉಪಸ್ಥಿತರಿದ್ದರು.

ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿದರು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಐ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತ್ರಿ ವಂದಿಸಿದರು. ವಿದ್ಯಾರ್ಥಿ ಕೃಷ್ಣ ಪ್ರಸಾದ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ