ನರಗುಂದ: ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಸಾಧ್ಯವೆಂದು ವಿರಕ್ತಮಠದ ಶಿವಕುಮಾರ ಶ್ರೀಗಳು ಹೇಳಿದರು.
ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಮಾತನಾಡಿ, ಜ್ಞಾನ ಮುದ್ರಾ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಸಂತೋಷದ ವಿಷಯ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀಡುತ್ತಿರುವುದು ಶ್ಲಾಘನಿಯ ಮತ್ತು ವಿದ್ಯಾರ್ಥಿಗಳು ಬುದ್ಧಿಮತ್ತೆ (ಐಕ್ಯೂ) ಪ್ರಮಾಣ ಹೆಚ್ಚಿಸುವುದಲ್ಲದೆ ಈ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿ ಮತ್ತು ಪಾಲಕರೊಂದಿನ ಭಾವನಾತ್ಮಕ (ಎಕ್ಯೂ) ಪ್ರಮಾಣವನ್ನು ಹೆಚ್ಚಿಸಿದೆ ಎಂದರು. ರಾಘವೇಂದ್ರ ಬಾಸುರ ಮಾತನಾಡಿ, ಸಂಸ್ಥೆಯು ಉತ್ತಮ ಶಿಕ್ಷಣದೊಂದಿಗೆ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರತೆಗೆಯುವುದು ತುಂಬಾ ಅವಶ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆ ವೇದಿಕೆ ಕಲ್ಪಿಸುತ್ತಿರುವುದು ಸಂತೋಷ ಎಂದರು.
ಸಂಸ್ಥೆಯ ಅಧ್ಯಕ್ಷ ವಿ.ಜಿ. ಮಮಟಗೇರಿ ಮಾತನಾಡಿ, ನಮ್ಮ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ದೇಸಿಯ ಕ್ರೀಡೆಯಾದ ಮಲ್ಲಕಂಭ ಮತ್ತು ಯೋಗದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದರು.ಸಂಸ್ಥೆಯ ವತಿಯಿಂದ ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಬಂದ ವಿದ್ಯಾರ್ಥಿ ಮುಬಾರಕ ಮುಲ್ಲಾ ಇವರನ್ನು ಸನ್ಮಾನಿಸಲಾಯಿತು.