ವಿಕಸಿತ ಭಾರತಕ್ಕಾಗಿ ಗುಣಮಟ್ಟದ ಶಿಕ್ಷಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

KannadaprabhaNewsNetwork |  
Published : Dec 23, 2024, 01:01 AM IST
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ನೂತನ ಕಟ್ಟಡ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು ಎಂದು ಹೇಳಿದ ಪ್ರಹ್ಲಾದ ಜೋಶಿ.

ಹುಬ್ಬಳ್ಳಿ:

ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸನ್ನು ನನಸಾಗಿಸಲು ಪ್ರತಿ ಮಗುವಿಗೆ ಉತ್ತಮ ಶಿಕ್ಷಣ ನೀಡಲು ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಎನ್‌ಟಿಪಿಸಿ ಕಂಪನಿಯ ಸಿಎಸ್‌ಆರ್ ಚಟುವಟಿಕೆಯ ₹ 54 ಲಕ್ಷ ವೆಚ್ಚದ ಅನುದಾನದ ಅಡಿಯಲ್ಲಿ ನೂತನ ಕಟ್ಟಡದ ಭೂಮಿಪೂಜೆ ಹಾಗೂ 125 ಡೆಸ್ಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು. ಅದರಂತೆ ನಾನೇ ಸ್ವತಃ ಖಾಸಗಿ ಕಂಪನಿಗಳಿಂದ ಅನುದಾನ ಪಡೆದು ಡೆಸ್ಕ್‌ ಒದಗಿಸಿದ್ದೇನೆ. ಅದರಂತೆ ಈ ಶಾಲೆಗೂ 125 ಡೆಸ್ಕ್‌ ವಿತರಿಸಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಎರಡು ಶಾಲಾ ಕೊಠಡಿಗಳನ್ನು ₹ 28 ಲಕ್ಷ ವೆಚ್ಚದಲ್ಲಿ ವಿವೇಕ ಯೋಜನೆ ಅಡಿ ಮಂಜೂರು ಮಾಡಿಸಲಾಗಿದೆ ಎಂದರು.

ಈ ವೇಳೆ ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಂಡಳ ಅಧ್ಯಕ್ಷ ಶಂಕರಕೊಮಾರ ದೇಸಾಯಿ, ಭೀಮಣ್ಣ ರಾಮದುರ್ಗ, ಸಹದೇವ ಹಾವೇರಿ, ಗುರುನಾಥಗೌಡ, ಸವಿತಾ ಅಮರಶೆಟ್ಟಿ, ಬಸವರಾಜ ತಂಬಾಕದ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!