ಚಾಮರಾಜನಗರ: ರಾಜ್ಯಸರ್ಕಾರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೩-೨೪ ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸಸಿಗೆ ನೀರೆರೆಯುವದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ, ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ದಿಗೆ ಹೆಚ್ಚು ಅನುದಾನ ನೀಡುವ ಮೂಲಕ ಪ್ರತಿಯೊಬ್ಬರಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಿಆರ್‌ಎಫ್ ಅನುದಾನದಲ್ಲಿ ಚಂದಕವಾಡಿ ಶಾಲೆ, ಬಾಲಕರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ತಲಾ ೧೦ಲಕ್ಷ ರು.ಗಳಂತೆ ಒಟ್ಟು ೪೦ಲಕ್ಷ ರು.ಗಳನ್ನು ಶೌಚಾಲಯ, ಶುದ್ಧ ಕುಡಿಯುವ ಘಟಕ ನಿರ್ಮಿಸಲು ಬಿಡುಗಡೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕಪಡೆದ ೯ಮಂದಿ ವಿದ್ಯಾರ್ಥಿಗಳು, ಇತಿಹಾಸ, ಕನ್ನಡ, ಭೂಗೋಳ ಶಾಸ್ತ್ರದಲ್ಲಿ ೧೦೦ಕ್ಕೆ ೧೦೦ ಅಂಕಪಡೆದ ಮೂವರು ವಿದ್ಯಾರ್ಥಿಗಳು, ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಖಲೀಂ ಉಲ್ಲಾಖಾನ್, ಉಪನ್ಯಾಸಕರಾದ ಟಿ.ಮಧು, ರಂಗಸ್ವಾಮಿ, ಎಂ.ಮಹೇಂದ್ರ, ಶೀಲಾ, ಸವಿತಾ, ಕಾಲೇಜಿನ ಸಿಬ್ಬಂದಿ ಹಾಗೂ ಅತಿಥಿ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.