ಸಮಾಜ ಸುಧಾರಣೆಗೆ ಗುಣಮಟ್ಟದ ಶಿಕ್ಷಣ ಅಗತ್ಯ

KannadaprabhaNewsNetwork |  
Published : Oct 10, 2025, 01:02 AM IST
ಬಾಗಲಕೋಟೆ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿಗಳ ಕೊಠಡಿಗಳ ಹಾಗೂ ಗ್ರಂಥಾಲಯ ಕಟ್ಟಡ ನಿಮಾರ್ಣದ ಶಂಕುಸ್ಥಾಪನೆ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಂದು ರಾಜ್ಯಮಟ್ಟದಲ್ಲಿ ಉತ್ತಮ ಬೆಳವಣಿಗೆಯಾಗಿದೆ. ಸುಮಾರು ಮೂರು ಸಾವಿರದಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಇಂದಿನ ಪದವಿ ಕಲಿಯುವ ವಿದ್ಯಾರ್ಥಿಗಳು ಸಾಮಾಜಿಕ ಪರಿಸರದ ಜ್ಞಾನವನ್ನು ಅರಿತುಕೊಳ್ಳಬೇಕಾಗಿದೆ. ಸಮಾಜದ ಸುಧಾರಣೆಗೆ ಗುಣಮಟ್ಟದ ಶಿಕ್ಷಣ ಅಗತ್ಯವಿದೆ ಎಂದು ಶಾಸಕರಾದ ಎಚ್.ವೈ.ಮೇಟಿ ಹೇಳಿದರು.

ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಬಾಗಲಕೋಟೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬಾಗಲಕೋಟೆ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿಗಳ ಕೊಠಡಿಗಳ ಹಾಗೂ ಗ್ರಂಥಾಲಯ ಕಟ್ಟಡ ನಿಮಾರ್ಣದ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಓದುವ ಎಲ್ಲಾ ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಮತ್ತು ಮಾನವೀಯ ಸಂಬಂಧಗಳ ಮೌಲ್ಯವನ್ನು ತಿಳಿಸುವ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ಕಾಲೇಜು ರಾಜ್ಯದಲ್ಲಿಯೇ ನೋಡಲ್ ಮತ್ತು ಮಾಡಲ್ ಕಾಲೇಜಾಗಿ ಹೊರಹೊಮ್ಮಿದ್ದು ಇಡೀ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಈ ಕಾಲೇಜು ಮತ್ತಷ್ಟು ಉನ್ನತ ಮಟ್ಟದಲ್ಲಿ ಬೆಳೆಯಲಿ ಅದಕ್ಕಾಗಿ ತರಗತಿಗಳ ಅನುಕೂಲಕ್ಕಾಗಿ ಕೊಠಡಿಗಳನ್ನು ಹಾಗೂ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು, ಇದರ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಂದು ರಾಜ್ಯಮಟ್ಟದಲ್ಲಿ ಉತ್ತಮ ಬೆಳವಣಿಗೆಯಾಗಿದೆ. ಸುಮಾರು ಮೂರು ಸಾವಿರದಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜು ಅಭಿವೃದ್ಧಿಯಲ್ಲಿ ಶಾಸಕರ ಸಹಕಾರ ಮತ್ತು ಕೊಡುಗೆ ಅಪಾರವಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಸವಿತಾ ಲೆಂಕೆಣ್ಣವರ, ಜಿಪಂ ಮಾಜಿ ಅಧ್ಯಕ್ಷರಾದ ಬಾಯಕ್ಕ ಮೇಟಿ, ಮುಖಂಡರಾದ ಮಾರೇಶ ಯಮನಾಳ, ದಂಡಿನ, ನಂದಿಕೋಲಮಠ, ಧರ್ಮಣ್ಣ, ಬೂಡಾ ಸದಸ್ಯರಾದ ಮಜ್ಜಿಗಿ ವೇದಿಕೆ ಮೇಲಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಶಾಸಕರಾದ ಎಚ್.ವೈ.ಮೇಟಿ ಅವರ 80ನೇ ಹುಟ್ಟು ಹಬ್ಬದ ಅಂಗವಾಗಿ ಕಾಲೇಜಿನ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿ, ಪ್ರೊ.ಸಂಪತ್ ಲಮಾಣಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ