ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ

KannadaprabhaNewsNetwork | Published : Jun 22, 2024 12:51 AM

ಸಾರಾಂಶ

ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಹಾನಗಲ್ಲ: ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.ಹಾನಗಲ್ಲ ತಾಲೂಕಿನ ಹುಣಸೆಟ್ಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಗುಣಮಟ್ಟ ತಿಳಿಯಲು ಮಕ್ಕಳೊಂದಿಗೆ ಸಂವಾದಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಲಭ್ಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಗಮನ ಹರಿಸಬೇಕಿದೆ. ಅನುದಾನ ಲಭ್ಯತೆ ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು. ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಒತ್ತು ನೀಡಲಾಗಿದೆ. ಸಮುದಾಯದ ಸಹಭಾಗಿತ್ವದಲ್ಲಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಸರ್ಕಾರದ ಅನುದಾನಕ್ಕೆ ಕಾಯದೇ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಸೌಲಭ್ಯ ಒದಗಿಸಲಾಗುತ್ತಿದೆ. ಸಮಯ ಪಾಲನೆ, ಶಿಸ್ತು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಎಂದು ಮುಖ್ಯೋಪಾಧ್ಯಾಯರಿಗೆ ಸಲಹೆ ನೀಡಿದರು. ಅಗತ್ಯ ಕೊಠಡಿ ಸೇರಿದಂತೆ ಇತರ ಸೌಲಭ್ಯ ಕಲ್ಪಿಸುವಂತೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಮನವಿ ಸಲ್ಲಿಸಿದರು. ಬಳಿಕ ವರ್ಗ ತರಗತಿಗಳಿಗೆ ಭೇಟಿ ನೀಡಿದ ಶ್ರೀನಿವಾಸ ಮಾನೆ, ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಶೈಕ್ಷಣಿಕ ಚಟುವಟಿಕೆಗಳ ಹಾಗೂ ಸ್ಮಾರ್ಟ್ ಕ್ಲಾಸ್ ಕಲಿಕೆಯ ಕುರಿತು ಮಾಹಿತಿ ಪಡೆದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಎಸ್‌ಡಿಎಂಸಿ ಅಧ್ಯಕ್ಷ ನಾಗನಗೌಡ ಗಿರೇಗೌಡ್ರ, ಗ್ರಾಪಂ ಸದಸ್ಯರಾದ ರಾಘವೇಂದ್ರ ಕರೆಪ್ಪನವರ, ರೇಣುಕಾ ಆಡೂರು, ಶಿಕ್ಷಕಿ ಸ್ವರ್ಣಲತಾ ಸುಣಗಾರ, ಮುಖಂಡರಾದ ಈರಣ್ಣ ಬೈಲವಾಳ, ಮಂಜಪ್ಪ ಹೊಂಬಳಿ, ಗಂಗಪ್ಪ ಆನೆಗುಂದಿ, ಶಂಕರಗೌಡ ಪಾಟೀಲ, ಕರಬಸನಗೌಡ ಉಜ್ಜನಗೌಡ್ರ, ಫಕ್ಕೀರೇಶ ಭಜಂತ್ರಿ, ಸುರೇಶ ಕರೆಪ್ಪನವರ, ಮುಖ್ಯೋಪಾಧ್ಯಾಯ ಹಾಲಪ್ಪ ಮಡಿವಾಳರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this article