ಜಾಗ ಇದ್ದರೆ ಮಾತ್ರ) ವಿಶೇಷಚೇತನರಿಗೆ ಗುಣಮಟ್ಟದ ಆರೋಗ್ಯ ಸೇವೆ: ಕಾಮತ್

KannadaprabhaNewsNetwork |  
Published : Jul 16, 2026, 03:15 AM IST
4-ಎನ್ ಪಿ ಕೆ-2.ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಮಡಿಕೇರಿ, ಸಮುದಾಯವೈದ್ಯಶಾಸ್ತ್ರ ವಿಭಾಗಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್, ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರ ಆರೋಗ್ಯತಪಾಸಣಾ ಶಿಬಿರದ ಉದ್ಘಾಟನೆ.14-ಎನ್ ಪಿ ಕೆ-3.ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಮಡಿಕೇರಿ, ಸಮುದಾಯವೈದ್ಯಶಾಸ್ತ್ರ ವಿಭಾಗಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್, ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರ ಆರೋಗ್ಯತಪಾಸಣಾ  ಶಿಬಿರದಲ್ಲಿಭಾಗವಹಿಸಿದ ಪ್ರಮುಖರು ಹಾಗೂ ಫಲಾನುಭವಿಗಳು. | Kannada Prabha

ಸಾರಾಂಶ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮುದಾಯ ವೈದ್ಯಶಾಸ್ತ್ರ ವಿಭಾಗ ಹಾಗೂ ಪುನಶ್ಚೇತನ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ವಿಶೇಷ ಚೇತನರಿಗಾಗಿ ಆರೋಗ್ಯ ತಪಾಸಣಾ ಶಿಬಿರ ನಾಪೋಕ್ಲು ಪುನಶ್ಚೇತನ ಚಾರಿಟೆಬಲ್‌ ಟ್ರಸ್ಟ್ ನಲ್ಲಿ ನಡೆಯಿತು.

ಕನ್ನಡಪ್ರಭವಾರ್ತೆ ನಾಪೋಕ್ಲು

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮುದಾಯ ವೈದ್ಯಶಾಸ್ತ್ರ ವಿಭಾಗ ಹಾಗೂ ಪುನಶ್ಚೇತನ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ವಿಶೇಷ ಚೇತನರಿಗಾಗಿ ಆರೋಗ್ಯ ತಪಾಸಣಾ ಶಿಬಿರ ನಾಪೋಕ್ಲು ಪುನಶ್ಚೇತನ ಚಾರಿಟೆಬಲ್‌ ಟ್ರಸ್ಟ್ ನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಮಚಂದ್ರ ಕಾಮತ್ ಮಾತನಾಡಿ, ವಿಶೇಷ ಚೇತನರಿಗೆ ಗುಣಮಟ್ಟದ ಹಾಗೂ ಸಮಾನ ಆರೋಗ್ಯ ಸೇವೆಗಳನ್ನು ತಲುಪಿಸುವ ಅಗತ್ಯವನ್ನು ಒತ್ತಿ ಹೇಳಿದರು. ಸಮಾಜದ ಎಲ್ಲ ವರ್ಗಗಳ ಸಹಕಾರದಿಂದ ವಿಶೇಷ ಚೇತನರ ಆರೋಗ್ಯ, ಶಿಕ್ಷಣ ಮತ್ತು ಪುನರ್ವಸತಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ. ವೈದ್ಯಕೀಯ ಇಲಾಖೆ ವಿಶೇಷ ಕಾಳಜಿ ವಹಿಸಿದ್ದು ಬೇರೆ ಬೇರೆ ಆರೋಗ್ಯ ಕೇಂದ್ರಗಳಲ್ಲಿ ಇಂತಹ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಲಾಗಿದೆ ಎಂದರು.

ಪುನಶ್ಚೇತನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಬಾಳೆಯಡ ದಿವ್ಯಾ ಭಾಗವಹಿಸಿ ಮಾತನಾಡಿ 15 ವರ್ಷ ಮೇಲ್ಪಟ್ಟ ವಿಕಲಚೇತನ ಮಕ್ಕಳ ಏಳಿಗೆಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ವಿಶೇಷ ಚೇತನ ಮಕ್ಕಳ ಬಗ್ಗೆವಿಶೇಷ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರಂಭಿಸಿರುವ ಆರೋಗ್ಯ ಸೇವೆ ಯೋಜನೆ ಇದಾಗಿದೆ ಎಂದರು. ಸರ್ಕಾರದಿಂದ ವಿಶೇಷ ಚೇತನರಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಪುನರ್ವಸತಿ ಸೇವೆಗಳ ಕುರಿತು ಮಾಹಿತಿ ನೀಡಿ, ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ವಿಶೇಷ ಚೇತನರಿಗೆ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಬಿ.ಆರ್, ನಾಪೋಕ್ಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಬಿ.ಬಿ ಸುಬ್ಬಯ್ಯ, ಓಂಪ್ರಕಾಶ್ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಳುವಾಯಿ ಘಟಕಕ್ಕೆ ಮುರಳಿಧರ್ ಎಸ್. ಅಧ್ಯಕ್ಷರಾಗಿ ಆಯ್ಕೆ
ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ