ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ವಳಗೆರೆದೊಡ್ಡಿ ಗ್ರಾಮದಲ್ಲಿ 17.34 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮಹಿಳಾ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹಾಲು ಒಕ್ಕೂಟ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಡೇರಿಗಳ ಪೈಪೋಟಿ ನಡುವೆ ಸಹ ಗ್ರಾಹಕರಿಗೆ ಗುಣಮಟ್ಟದ ಹಾಲು ಮಾರಾಟ ಮಾಡುತ್ತಿದೆ. ಒಕ್ಕೂಟ ಉತ್ತರ ಭಾರತದ ಸೇರಿದಂತೆ ಕರ್ನಾಟಕದ ಮಾರುಕಟ್ಟೆಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಗಣನೀಯವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಹರೀಶ್ ಬಾಬು ಮೆಚ್ಚುಗೆ ವ್ಯಕ್ತಪಡಿಸಿದರು.ಉಪ ವ್ಯವಸ್ಥಾಪಕ ಡಾ.ಮಂಜೇಶ್ ಗೌಡ ಮಾತನಾಡಿ, ಮಹಿಳಾ ಸಂಘದ ಕಟ್ಟಡ ನಿರ್ಮಾಣಕ್ಕೆ ಕೆಎಂಎಫ್‌ನಿಂದ 4.50 ಲಕ್ಷ, ಜಿಲ್ಲಾ ಹಾಲು ಒಕ್ಕೂಟದಿಂದ 3. ಲಕ್ಷ, ಸಂಘದ ಕಟ್ಟಡದ ನಿಧಿಯಿಂದ 1.60 ಲಕ್ಷ, ಆಪತ್ತು ನಿಧಿಯಿಂದ 1.24 ಲಕ್ಷ, ಶಾಸಕರ ಅನುದಾನ 5 ಲಕ್ಷ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ರಸ್ತೆಯಿಂದ 2 ಲಕ್ಷ ಸಹಾಯಧನ ಸೇರಿದಂತೆ ಒಟ್ಟು 17.34 ಲಕ್ಷ ವೆಚ್ಚದಲ್ಲಿ ಸಂಘದ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಮುಂದಿನ 4 ತಿಂಗಳಲ್ಲಿ ಪೂರ್ಣಗೊಳಿಗೊಳ್ಳಲಿದೆ ಎಂದರು.