ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ

KannadaprabhaNewsNetwork |  
Published : Jul 16, 2026, 01:15 AM IST
40 | Kannada Prabha

ಸಾರಾಂಶ

ಗರದಲ್ಲಿ ವೈಟ್ ಟ್ಯಾಪಿಂಗ್ ಮಾಡುತ್ತಿರುವ ಕಡೆ ಜನರಿಗೆ ಮಾಹಿತಿ ನೀಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಗರದಲ್ಲಿ ವೈಟ್ ಟ್ಯಾಪಿಂಗ್ ಮಾಡುತ್ತಿರುವ ಕಡೆ ಜನರಿಗೆ ಮಾಹಿತಿ ನೀಡಬೇಕು. ಇನ್ನೂ ಪ್ರಾರಂಭವಾಗದೆ ಇರುವ ವೈಟ್ ಟೈಪಿಂಗ್ ಕಾಮಗಾರಿಯನ್ನು ದಸರಾ ಮುಗಿದ ಮೇಲೆ ಪ್ರಾರಂಭಿಸಿ. ದಸರಾದಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತದೆ. ವಾಹನ ದಟ್ಟಣೆ ಆಗದಂತೆ ಹೆಚ್ಚಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ವೈಟ್ ಟ್ಯಾಪಿಂಗ್ ಕಾಮಗಾರಿ ಮಾಡುತ್ತಿದ್ದು ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತಿದೆ. ದಸರಾ ಪ್ರಾರಂಭವಾದಾಗ ಕಾಮಗಾರಿ ನಿಲ್ಲಿಸಿ, ವಾಹನ ಸಂಚಾರಕ್ಕೆ ಸುಗಮ ವ್ಯವಸ್ಥೆ ಮಾಡಿ, ದಸರಾ ಮುಗಿದ ನಂತರ ಕಾಮಗಾರಿ ಮುಂದುವರಿಸಿ ಎಂದು ಅವರು ಹೇಳಿದರು.ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಮೈಸೂರು - ಟಿ. ನರಸೀಪುರ ರಸ್ತೆ ವೈಜ್ಞಾನಿಕವಾಗಿ ಇಲ್ಲ. ಇದರಿಂದ ಅಪಘಾತಗಳು ಆಗುತ್ತಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಗಮನ ಹರಿಸಬೇಕು ಎಂದು ಅವರು ಸೂಚಿಸಿದರು.ಮೈಸೂರು ನಗರ ಪಾಲಿಕೆ ವತಿಯಿಂದ ಮೈಸೂರು ನಗರದ ರಸ್ತೆಗಳ ನವೀಕರಣ ಕಾಮಗಾರಿಯನ್ನು ದಸರಾ ಪ್ರಾರಂಭವಾಗುವ ಒಂದು ವಾರದ ಮುಂಚೆಯೇ ಪೂರ್ಣಗೊಳಿಸಬೇಕು ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದರು.ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಯಾವುದೇ ಹಳ್ಳಿಯಲ್ಲಿಯೂ ಕುಡಿಯುವ ನೀರಿನ ತೊಂದರೆ ಉಂಟಾಗಬಾರದು. ಶುದ್ಧ ಕುಡಿಯುವ ನೀರಿನ ಪೂರೈಕೆ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ಎದುರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯಲ್ಲಿ ಶೇ.98.16ರಷ್ಟು ಎನುಮೆರೇಶನ್ ಫಾರಂ ವಿತರಣೆ
ಬಡವರ ಹೆಸರಿನ ಖಾತೆಯ ಬಹುಕೋಟಿ ಹಗರಣ ತನಿಖೆಗೆ ಆಗ್ರಹ