ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅರವಳಿಕೆ ಶಾಸ್ತ್ರ ವಿಭಾಗ ಮತ್ತು ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಕರ್ನಾಟಕ ರಾಜ್ಯ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಎರಡು ದಿನಗಳ ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಪರೀಕ್ಷೆ ಸಂಬಂಧಿತ ಕಾರ್ಯಾಗಾರದಲ್ಲಿ ವೈದ್ಯಕೀಯ ಉಪಕರಣಗಳ ಪ್ರದರ್ಶನ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಆಧುನಿಕ ವೈದ್ಯಕೀಯ ಉಪಕರಣಗಳು ಅವಿಷ್ಕಾರಗೊಂಡಿವೆ. ಪರಿಣಾಮವಾಗಿ ವೈದ್ಯರು ತಮ್ಮ ಚಿಕಿತ್ಸಾ ಗುಣಮಟ್ಟ ಹೆಚ್ಚಿಸಲು ಬಳಕೆಯಲ್ಲಿರುವ ಹೊಸ ಉಪಕರಣ ಉಪಯೋಗಿಸಿಕೊಳ್ಳುವುದು ಅಗತ್ಯವಾಗಿದೆ. ಅರವಳಿಕೆ ಶಾಸ್ತ್ರ ಮಾತ್ರವಲ್ಲದೆ ವಿವಿಧ ವೈದ್ಯಕೀಯ ವಿಷಯಗಳ ಉಪಕರಣಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಮೂಲಕ ವೈದ್ಯರಿಗೆ ಅವರ ವಿಷಯದಲ್ಲಿ ಅವಿಷ್ಕಾರಗೊಂಡ ವೈದ್ಯಕೀಯ ಉಪಕರಣ ಪರಿಚಯಿಸಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳಿಗೆ ಅಗತ್ಯ ಉಪಕರಣ ಖರೀದಿಸಲು ಪ್ರದರ್ಶನದಿಂದ ಅನುಕೂಲವಾಗಲಿದೆ ಎಂದರು.ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಮಾಜಿ ಅಧ್ಯಕ್ಷ ಮತ್ತು ವಿಶ್ರಾಂತ ಕುಲಪತಿ ಡಾ.ಪಿ.ಎಫ್.ಕೊಟೂರ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಭಾರತೀಯ ಅರವಳಿಕೆ ಶಾಸ್ತ್ರಜ್ಞರ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ.ಶಿವಕುಮಾರ್ ಕುಂಬಾರ, ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ, ಐ.ಎಸ್.ಎ ಅಕಾಡೆಮಿಕ್ ಕೌನ್ಸಿಲ್ ಚೇರ್ಮನ್ ಡಾ.ಗುರುಲಿಂಗಪ್ಪ ಪಾಟೀಲ, ಐಎಸ್ಎ ಸೆಕ್ರೆಟರಿ ಡಾ. ಶಿವಕುಮಾರ್, ಐಎಸ್ಎ ಪದಾಧಿಕಾರಿಗಳಾದ ಡಾ.ಶ್ರೀನಿವಾಸನ್, ಡಾ.ಸಂಧ್ಯಾ, ಡಾ.ಅನಿಲಕುಮಾರ್, ಸಮ್ಮೇಳನದ ಅಧ್ಯಕ್ಷ ಡಾ.ಶಿವಾನಂದ ಹುಲಕುಂದ ಮತ್ತು ಕಾರ್ಯದರ್ಶಿ ಡಾ. ಛಾಯಾ ಜೋಶಿ ಉಪಸ್ಥಿತರಿದ್ದರು.