ದೇವನಹಳ್ಳಿ: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರುತಿಸಿದ್ದು, ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಪಟ್ಟಣದ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ೭೦ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು, ನಮ್ಮ ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್, ಪ್ರಖ್ಯಾತ ಗಾಯಕ ಸಿ.ಅಶ್ವತ್ಥ್, ಕಮಲಾ ಹಂಪನಾ, ವಿ.ಸೀತಾರಾಮಯ್ಯ, ತಾಪು ವೆಂಕಟರಾಮ್, ಸಮೇತನಹಳ್ಳಿ ರಾಮಯ್ಯ ಸೇರಿದಂತೆ ಇನ್ನೂ ಹಲ ಸಾಹಿತಿಗಳು, ಕಲಾವಿದರು ಹಾಗೂ ಸಮಾಜ ಸೇವಕರು ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವಾರು ಜನಪ್ರಿಯ, ಜನಪರ, ಜನಾನುರಾಗಿ ಕಾರ್ಯಗಳನ್ನು ಮಾಡಿತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನುಡಿದಂತೆ ನಡೆಯುವ ಮೂಲಕ ಜನರಿಗೆ ಹತ್ತಿರವಾಗಿದ್ದೇವೆ. ಮಾತೃ ಹೃದಯಿ ಸರ್ಕಾರಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗುತ್ತಿದೆ. ಅನ್ನಭಾಗ್ಯ ಯೋಜನೆಯನ್ನು ೨೦೧೩ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದೇಶದಲ್ಲಿ ಮೊಟ್ಟ ಮೊದಲಿಗೆ ಜಾರಿಗೆ ತಂದ ಕೀರ್ತಿ ನಮ್ಮದು. ಇದರ ಮುಖ್ಯ ಉದ್ದೇಶ ರಾಜ್ಯದಲ್ಲಿ ಹಸಿವು ಮುಕ್ತವಾಗಿಸುವುದು ನಮ್ಮ ಗುರಿಯಾಗಿದ್ದು, ಇದು ನಮ್ಮ ಸರ್ಕಾರದ ಹೆಮ್ಮೆಯ ಕ್ಷಣವಾಗಿದೆ ಎಂದರು.
ಜಿಲ್ಲೆಯಲ್ಲಿ ೨,೨೯,೬೫೧ ಬಿಪಿಎಲ್ ಪಡಿತರ ಚೀಟಿದಾರರಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ ೫ ಕೆ.ಜಿ ಅಕ್ಕಿಯೊಂದಿಗೆ ಒಟ್ಟು ೧೦ ಕೆ.ಜಿ ಅಕ್ಕಿಯನ್ನು ನೀಡುತ್ತಿದ್ದು, ೫ ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಇಂದಿರಾ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು. ಇದರಲ್ಲಿ ತೊಗರಿ ಬೇಳೆ, ಹೆಸರು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಒಳಗೊಂಡ ಪೋಷಕಾಂಶಯುಕ್ತ ವಸ್ತುಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ವಿವಿಧ ಯೋಜನೆ, ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ಆಶ್ರಯ ನಿವೇಶನ ಯೋಜನೆಯಡಿ ಜಿಲ್ಲೆಯ ನಿವೇಶನ ಅಭಿವೃದ್ಧಿಗೆ ೩೫೪.೧೭ ಎಕರೆ ಜಮೀನು ಯೋಗ್ಯವಾಗಿದ್ದು, ಇದರಲ್ಲಿ ೨೯೪.೦೮ ಎಕರೆ ಜಮೀನಿನಲ್ಲಿ ೮೨೬೦ ನಿವೇಶನಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ ಈಗಾಗಲೇ ಒಟ್ಟು ೧೩೬೧ ನಿವೇಶನ ರಹಿತ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಪ್ರಗತಿ ಕಾಲೋನಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ೩೧೬.೪೦ ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.ಮನಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು:
ಕನ್ನಡ ನಾಡು ನುಡಿ, ಸಂಸ್ಕೃತಿ, ಸಾಹಿತ್ಯವನ್ನು ಪ್ರತಿಬಿಂಬಿಸುವ ಜಾನಪದ ಗೀತೆ, ಕವನ, ಕವಿತೆಗಳ ವೈಶಿ? ಪೂರ್ಣ ಸಂಗೀತ ನೃತ್ಯ, ಭರತನಾಟ್ಯ, ಯಕ್ಷಗಾನದ ಶಾಲಾ ವಿದ್ಯಾರ್ಥಿಗಳ ಅಭಿನಯಗಳು ನೋಡುಗರ ಮನಸೂರೆಗೊಂಡಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬಾ, ಗ್ಯಾರಂಟಿ ಯೋಜನೆ ಅನು?ನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಸಿ.ಜಗನ್ನಾಥ್ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃ?ಪ್ಪ ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ಜೆ.ಎ.ರವೀಂದ್ರ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಬಾಕ್ಸ್................ನಾಲ್ವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗರಿ
ಶಿಕ್ಷಣ ಕ್ಷೇತ್ರದಲ್ಲಿ ಹೊಸಕೋಟೆ ತಾಲೂಕಿನ ಬಿ.ಸಿ ಶ್ರೀನಿವಾಸಯ್ಯ, ಕನ್ನಡಪರ ಸೇವೆಗೆ ನೆಲಮಂಗಲ ತಾಲೂಕಿನ ಉಮೇಶ್ ಗೌಡ ಜಿ, ಕೃಷಿ ಕ್ಷೇತ್ರದಲ್ಲಿ ದೇವನಹಳ್ಳಿ ತಾಲೂಕಿನ ಬಿ.ಆರ್.ಮಂಜುನಾಥ್, ತೋಟಗಾರಿಕೆ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಹಳ್ಳಿ ರೈತ ಅಂಬರೀಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.