ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಜನತೆಯ ಸಮಸ್ಯೆಗಳನ್ನು ಮನೆ ಬಾಗಿಲಿನಲ್ಲಿಯೇ ಪರಿಹರಿಸುವ ಸದುದ್ದೇಶದಿಂದ ನೂತನವಾಗಿ ಪ್ರಜಾಸೇವೆ ಇಲಾಖೆ ಮೂಲಕ ಪ್ರಜಾಸೇವೆ ಆಂದೋಲನ ಸಭೆಯನ್ನು ರಾಜ್ಯದೆಲ್ಲೆಡೆ ನಡೆಸುತ್ತಿದೆ. ಜಿಲ್ಲೆಯಲ್ಲೂ ಇಂದಿನಿಂದಲೇ ಪ್ರತಿ ಶನಿವಾರ ಪ್ರಜಾಸೇವೆ ಸಭೆ ಆಯೋಜನೆ ಮಾಡಲಾಗುತ್ತಿದ್ದು, ಜನರು ನೇರವಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ತಮಗೆ ಯಾವ ಇಲಖೆಯಿಂದ ಸಮಸ್ಯೆಯಾಗಿದೆ? ಯಾವ ಸೌಲಭ್ಯಗಳು ಸಿಗಬೇಕಿದೆ ಎಂಬ ಬಗ್ಗೆ ಸಭೆಯಲ್ಲಿಯೇ ನೀಡಬಹುದು ಎಂದರು.ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಲಾಗುತ್ತದೆ. ಇಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ಅರ್ಜಿಗಳನ್ನು ಮುಂದಿನ ಹಂತದಲ್ಲಿ ಉನ್ನತ ಅಧಿಕಾರಿಗಳಿಗೆ ಕಳುಹಿಸಿ ಸ್ಪಂದನೆ ನೀಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಸಹ ಸಂಬಂಧಪಟ್ಟವರಿಗೆ ಕಳುಹಿಸಿ ಪರಿಹರಿಸಲಾಗುತ್ತದೆ. ಒಟ್ಟಾರೆ ಜನರ ಕುಂದು ಕೊರತೆಗಳಿಗೆ ಸರ್ಕಾರವೇ ಅವರ ಬಳಿ ಬಂದು ಇತ್ಯರ್ಥ ಮಾಡುವುದು ಪ್ರಜಾಸೇವೆ ಆಂದೋಲನ ಸಭೆಯ ಮುಖ್ಯ ಧ್ಯೇಯವಾಗಿದೆ ಎಂದು ತಿಳಿಸಿದರು.
ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಸತತ ಆರು ತಾಸುಗಳ ಕಾಲ ಸಚಿವರು ಕುಳಿತು ಸರತಿ ಸಾಲಿನಲ್ಲಿ ಬಂದ ಪ್ರತಿಯೊಬ್ಬರಿಂದಲೂ ಅರ್ಜಿ ಪಡೆದು ಅಹವಾಲುಗಳನ್ನು ಆಲಿಸಿದರು. ವಿವರವಾಗಿ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಇತ್ಯರ್ಥಕ್ಕೆ ಸೂಚಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ತಹಸೀಲ್ದಾರ್ ಗಿರಿಜಾ ಇತರರು ಇದ್ದರು.