ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಸೋಮವಾರ ಸಂಜೆ ಪಟ್ಟಣದಲ್ಲಿ ಪಂಚಾಯತ್‍ರಾಜ್ ಇಲಾಖೆ ವತಿಯಿಂದ ₹13 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಗ್ರಾಮೀಣಾಭಿವೃದ್ಧಿ ಭವನ ಮತ್ತು ಪ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿದ್ದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಲೆನಾಡಿನ ರೈತರ ಈ ಸಮಸ್ಯೆ ಪರಿಹರಿಸಲು ಇರುವ ತೊಡಕನ್ನು ಕಾನೂನು ತಿದ್ದುಪಡಿಯಿಂದಲೇ ಸರಿಪಡಿಸಬೇಕಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ಒಂದು ಹಂತಕ್ಕೆ ತಲುಪಿದೆ. ಶೀಘ್ರದಲ್ಲಿ ಹಕ್ಕು ಪತ್ರ ಕೊಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಿಸುವ ಕುರಿತಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 16 ಕಿ.ಮೀ. ದೂರದ ಈ ಮಾರ್ಗದಲ್ಲಿ 6.50 ಕಿಮೀ ಸುರಂಗ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈ ದೂರವನ್ನು ಕೇವಲ 20 ನಿಮಿಷದಲ್ಲಿ ಕ್ರಮಿಸಬಹುದಾಗಿದೆ ಎಂದರು.
ಸಮಾರಂಭದಲ್ಲಿ ಮಾಜಿ ಶಾಸಕ ಕಡಿದಾಳು ದಿವಾಕರ ಅವರನ್ನು ಸನ್ಮಾನಿಸಲಾಯಿತು. ಎಂಎಡಿಬಿ ಆಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಪಪಂ ಅಧ್ಯಕ್ಷೆ ಗೀತಾ ರಮೇಶ್, ತಾಪಂ ಇಒ ಎಂ.ಶೈಲಾ, ಆಡಳಿತಾಧಿಕಾರಿ ಆರ್.ಗಣೇಶ್ ಇದ್ದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ವಿವಿಧ ಕಾಮಗಾರಿಗಳನ್ನೂ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.- - - -05ಟಿಟಿಎಚ್ 01:
ತೀರ್ಥಹಳ್ಳಿ ಪಟ್ಟಣದಲ್ಲಿ ₹13 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಗ್ರಾಮೀಣಾಭಿವೃದ್ಧಿ ಭವನವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕಡಿದಾಳು ದಿವಾಕರ್, ಎಂಎಡಿಬಿ ಆಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಪಪಂ ಅಧ್ಯಕ್ಷೆ ಗೀತಾರಮೇಶ್ ಇದ್ದರು.