ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ಹೋಬಳಿ ಕೇಂದ್ರ ದಾಬಸ್‍ಪೇಟೆಯಲ್ಲಿ ಲಕ್ಷಾಂತರ ಜನ ವಾಸಿಸುತ್ತಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆರಿಸುವಂತೆ ಶಾಸಕರು ಹಾಗೂ ಮುಖಂಡರು, ಸ್ಥಳೀಯರು ಮನವಿ ಮಾಡಿದ್ದಕ್ಕೆ ಶಾಸಕರು ಈ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅನುಕೂಲ ಮಾಡಿಕೊಡುತ್ತೇನೆ ಎಂದರು.
ಟ್ರಾಮಾ ಸೆಂಟರ್ ಗೆ ಶೀಘ್ರದಲ್ಲೇ ಉಪಕರಣ:ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ಕಳೆದ ಎರಡು ವರ್ಷಗಳ ಹಿಂದೆ ಉದ್ಘಾಟನೆಯಾಗಿರುವ ಟ್ರಾಮಾ ಸೆಂಟರ್ ಗೆ ವೈದ್ಯರು ಹಾಗೂ ಉಪಕರಣಗಳು ಇಲ್ಲದ ಬಗ್ಗೆ ತಿಳಿಸಿದಾಗ ತಕ್ಷಣ ಆರೋಗ್ಯ ಇಲಾಖೆಯ ಕಮಿಷನರ್ ಗೆ ಕರೆ ಮಾಡಿ ಆರ್ಥಿಕ ಇಲಾಖೆಯ ಜೊತೆ ಚರ್ಚಿಸಿ ಅಗತ್ಯ ಉಪಕರಣಗಳನ್ನು ಒದಗಿಸುವಂತೆ ಸಚಿವರು ತಿಳಿಸಿದರು.
ಬಾಕ್ಸ್.......
ಈ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್ ಶಾಸಕರಾದ ಮೇಲೆ ತಾಲೂಕಿಗೆ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಅನೇಕ ಬಾರಿ ನನ್ನನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಶಾಸಕರು ಗೆದ್ದಮೇಲೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಇಂತಹ ಶಾಸಕರಿಗೆ ನೀವು ಸಹಕಾರ ನೀಡಬೇಕು ಎಂದು ಸಚಿವರು ತಿಳಿಸಿದರು.ಕೋಟ್
ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.ಎನ್.ಶ್ರೀನಿವಾಸ್, ಶಾಸಕರು
ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ, ವೈದ್ಯ ಡಾ.ಚೇತನ್, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಅಂಚೆಮನೆ ಪ್ರಕಾಶ್, ವನಿತ, ಶಿವಕುಮಾರ್, ಚಂದ್ರಣ್ಣ ಹೊಸಳಯ್ಯ, ಸಿದ್ದರಾಮು, ಸಿದ್ದರಾಜು, ಖಲೀಂಉಲ್ಲಾ, ದಿನೇಶ್ ನಾಯಕ್, ವೆಂಟಕಾಚಲಯ್ಯ, ಆನಂದ್, ನಾರಾಯಣಸ್ವಾಮಿ, ಚಂದ್ರಶೇಖರ್, ಸುರೇಶ್, ಜಗದೀಶ್, ಚಿಕ್ಕಣ್ಣ, ಅಜ್ಜೇಗೌಡ ಸೇರಿ ನೂರಾರು ಮುಖಂಡರು ಉಪಸ್ಥಿತರಿದ್ದರು.