ರಸಪ್ರಶ್ನೆ: ಸರ್ಕಾರಿ ಶಾಲೆ ಮಕ್ಕಳು ರಾಜ್ಯಕ್ಕೆ ದ್ವಿತೀಯ

KannadaprabhaNewsNetwork |  
Published : Jan 07, 2025, 12:16 AM IST
ಪೋಟೋ 6 : ಹನುಮಂತೇಗೌಡನಪಾಳ್ಯ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏರ್ಪಡಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ರಸಪ್ರಶ್ನೆಯಲ್ಲಿ ಹನುಮಂತೇಗೌಡಪಾಳ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ದಾಬಸ್‍ಪೇಟೆ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏರ್ಪಡಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ರಸಪ್ರಶ್ನೆಯಲ್ಲಿ ಹನುಮಂತೇಗೌಡಪಾಳ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಹನುಮಂತೇಗೌಡನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ದೇವರಾಜು, ಭರತ್ ಹಾಗೂ ಹರಿಣಿ ರಾಜ್ಯ ಮಟ್ಟದ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ ಪಡೆದು 27 ಸಾವಿರ ರು. ನಗದು ಬಹುಮಾನ ಹಾಗೂ ಶಾಲೆಗೆ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ.

ವಿಜ್ಞಾನ ಶಿಕ್ಷಕಿ ರೆಹನಾ ಸುಲ್ತಾನ ಮಾತನಾಡಿ, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವಿಜ್ಞಾನ ಹಾಗೂ ಗಣಿತ ತುಂಬಾ ಕಷ್ಟ ಎಂಬ ಮಾತಿದೆ. ಆದರೆ ಕಲಿಸುವ ಹಾಗೂ ಕಲಿಯುವ ಆಸಕ್ತಿ ಇದ್ದರೆ ಯಾರು ಬೇಕಾದರು ಸಾಧನೆ ಮಾಡಬಹುದು ಎಂಬುದಕ್ಕೆ ನಮ್ಮ ಶಾಲೆ ಮಕ್ಕಳೇ ನಿದರ್ಶನ ಎಂದರು.

ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳನ್ನು ಬಿಇಒ ರಮೇಶ್, ಇಸಿಒ ಗಳಾದ ಸುಚಿತ್ರಾ, ಗಿರೀಶ್, ಮುಖ್ಯಶಿಕ್ಷಕಿ ರುಕ್ಕಿಣಿ, ಸಹಶಿಕ್ಷಕ ಜಯರಾಮಯ್ಯ ಹಾಗೂ ಗ್ರಾಪಂ ಸದಸ್ಯೆ ಲಕ್ಷ್ಮೀಬೆಟ್ಟಸ್ವಾಮಿ ಅಭಿನಂದಿಸಿದ್ದಾರೆ.

ಪೋಟೋ 6 :

ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏರ್ಪಡಿಸಿದ್ದ ರಾಜ್ಯಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹನುಮಂತೇಗೌಡಪಾಳ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು 27 ಸಾವಿರ ರು. ನಗದು ಬಹುಮಾನ ಹಾಗೂ ಶಾಲೆಗೆ ವಿವಿಧ ಸೌಲಭ್ಯಗಳನ್ನು ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.23ಕ್ಕೆ ರೈತರ ದಿನಾಚರಣೆ, ರಾಜ್ಯಮಟ್ಟದ ಸಮಾವೇಶ
ಪ್ರಜಾಸೌಧ ನಿರ್ಮಾಣ ಜಾಗ ಬದಲಾವಣೆಗೆ ಆಗ್ರಹ