ಕನ್ನಡಪ್ರಭ ವಾರ್ತೆ ಮಧುಗಿರಿ
ಕೊಡಿಗೇನಹಳ್ಳಿ ಹೋಬಳಿ ಸುದ್ದೇಕುಂಟೆ ಗ್ರಾಮದ ಸರ್ಕಾರಿ ಪ್ರಾಥಮಿ ಪಾಠ ಶಾಲೆಯಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಕೊಡಿಗೇನಹಳ್ಳಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಧುಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಪಾಠ ಶಾಲೆಗಳ ಮಕ್ಕಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾವು ಶಾಲೆಗಳಲ್ಲಿ ವೃತ್ತ ಪತ್ರಿಕಗೆಳನ್ನು ದಿನ ನಿತ್ಯ ಓದುವುದರಿಂದ, ಸುಭಾಷಿತ, ಪ್ರಪಂಚದಲ್ಲಿ ನಡೆಯುವ ಘಟನಾವಳಿಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಇದರಿಂದ ನಮ್ಮ ಸಾಮಾನ್ಯ ಜ್ಞಾನವು ವೃದ್ಧಿಸುತ್ತಾ ಹೋಗುತ್ತದೆ. ಇದರಿಂದ ಸಾಮಾನ್ಯ ಜ್ಞಾನ ಸಂಪಾದನೆ ಹೆಚ್ಚಿದಂತೆಲ್ಲಾ ನಮ್ಮಲ್ಲಿ ಬುದ್ದಿ ವೃದ್ಧಿಯಾಗಿ ನಗರ ಪ್ರದೇಶಗಳ ಮಕ್ಕಳೊಂದಿಗೆ ಸರಿಸಮಾನಾಗಿ ಸ್ಪರ್ಧೆ ಮಾಡಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಈ ತಿಂಗಳ 15ರಂದು ಕಿತ್ತೂರಾಣಿ ಚನ್ನಮ್ಮ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದ್ದು, ಅಂತಹ ಶಾಲೆಗಳಿಗೆ ಆಯ್ಕೆಯಾಗಬೇಕಾದರೆ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಅತ್ಯವಶ್ಯಕ, ಅಲ್ಲದೆ ಸರ್ಕಾರಿ ಶಾಲೆಗಳ ಉಳಿವು ಮಕ್ಕಳ ಬೆಳವಣಿಗೆಗೆ ಸ್ಥಳೀಯರು ಮತ್ತು ಹಳೇ ವಿದ್ಯಾರ್ಥಿಗಳು ಕೈ ಜೋಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಗಂಗಾಧರ್ ವಿ.ರೆಡ್ಡಿಹಳ್ಳಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಸಾಮಾನ್ಯ ಜ್ಞಾನ ಅತಿ ಮುಖ್ಯ. ಮಕ್ಕಳು ಮೊಬೈಲ್ ಗೀಳಿಗೆ ಸಿಲುಕಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳದೇ ಓದುವ ಅವಧಿಯಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆ ಜೊತೆಗೆ ಕಠಿಣ ಅಭ್ಯಾಸ ನಡೆಸಿ ಅತ್ಯುನ್ನತ ಹುದ್ದೆ ಅಲಂಕರಿಸಲು ಪ್ರಮಾಣಿಕ ಪ್ರಯತ್ನ ಮಾಡಿ ಎಂದರು.
ದಾನಿಗಾಳಾದ ರಾಜು ಮಾತನಾಡಿ,ಓದು ವ್ಯಕ್ತಿಗೆ ಅತ್ಯುನ್ನತ ಸ್ಥಾನ ಪಡೆಯುವ ಜೊತಗೆ ಗೌರವಯುತವಾಗಿ ಬದುಕು ಸಂಸ್ಕಾರವನ್ನು ಕೂಡ ಕಲಿಸುತ್ತದೆ ಎಂದರು.