ದರ ಏರಿಸಿ ರಾಜ್ಯ ಸರ್ಕಾರದಿಂದ ಜನರ ಲೂಟಿ: ಆರ್.ಅಶೋಕ್‌

KannadaprabhaNewsNetwork |  
Published : Nov 20, 2026, 02:30 AM IST
ಪ್ರತಿಭಟನೆಯಲ್ಲಿ ಆರ್‌.ಅಶೋಕ್‌ ಮಾತನಾಡಿದರು | Kannada Prabha

ಸಾರಾಂಶ

ಕರ್ನಾಟಕ ಕಾಂಗ್ರೆಸ್‌ ಸರ್ಕಾರದಿಂದ ನಿರಂತರ ದರ ಏರಿಕೆ, ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಮಂಗಳೂರು ನಗರ ಉತ್ತರ ವತಿಯಿಂದ ಸುರತ್ಕಲ್‌ನಲ್ಲಿ ನಡೆದ ಬೃಹತ್‌ ಪ್ರತಿಭಟನೆ

ಮೂಲ್ಕಿ: ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ದರ ಏರಿಕೆ ಮತ್ತು ತೆರಿಗೆಯ ಮೂಲಕ ಜನರನ್ನು ಲೂಟಿ ಮಾಡಿ ಜನರು ಬದುಕಲು ಆಗದಂತಹ ಸ್ಥಿತಿಗೆ ತಂದಿಟ್ಟಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಕರ್ನಾಟಕ ಕಾಂಗ್ರೆಸ್‌ ಸರ್ಕಾರದಿಂದ ನಿರಂತರ ದರ ಏರಿಕೆ, ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಮಂಗಳೂರು ನಗರ ಉತ್ತರ ವತಿಯಿಂದ ಸುರತ್ಕಲ್‌ನಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಕೊಡಬೇಕಿತ್ತು, ಆದರೆ ಇದೀಗ ಸರ್ಕಾರವೇ ಪ್ರತಿಯೊಂದಕ್ಕೂ ಜನರಿಂದ ತೆರಿಗೆ ಹಣ ಪಡೆದು ಗ್ಯಾರಂಟಿ ಕೊಡುವ ಸ್ಥಿತಿಗೆ ಬಂದಿದೆ. ನಿಮ್ಮದು ಇನ್ನು ಒಂದು ವರ್ಷ ಮಾತ್ರ ಆಡಳಿತವಿದೆ, ಜನರು ಬದಲಾವಣೆ ಬಯಸಿದ್ದಾರೆ. ಒಂದು ವರ್ಷದಲ್ಲಿ ಜನರಿಗೆ ಆದಷ್ಟು ಒಳಿತು ಮಾಡಿ ಎಂದರು.

ಕಠಿಣ ಗೋಹತ್ಯೆ ಕಾಯ್ದೆಯನ್ನು ವಾಪಸ್ ಪಡೆದು ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಮತಾಂತರ ಕಾಯ್ದೆಯನ್ನು ವಾಪಸ್ ಪಡೆಯುತ್ತಿದೆ. ಸರ್ಕಾರ ಅಭಿವೃದ್ಧಿ ಕಾರ್ಯ ಬಿಟ್ಟು ಗೂಂಡಾಗಿರಿ, ಕೊತ್ವಾಲ್ ಮಾದರಿಯ ಆಡಳಿತವನ್ನು ಡಿ.ಕೆ. ಶಿವಕುಮಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಬಿಜೆಪಿ ಆಡಳಿತ ಅವಧಿಯಲ್ಲಿ 5000 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿತ್ತು. ವಿಧವಾ ವೇತನ, ಪಿಂಚಣಿ, ಅಭಿವೃದ್ಧಿ ಕಾರ್ಯಗಳನ್ನು ಸಾವಿರಾರು ಕೋಟಿ ರು.ಪಾಯಿಯಲ್ಲಿ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಒಂದೇ ಒಂದು ಹಕ್ಕುಪತ್ರ ಕೊಡಲಾಗಲಿಲ್ಲ, ಹೊಸ ರಸ್ತೆಯನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ ಎಂದರು.ಸಂಸದ ಬ್ರಿಜೇಶ್ ಚೌಟ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯ ಬಾಲಕೃಷ್ಣ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಇದ್ದರು. ರಾಜೇಶ್ ಕೊಟ್ಟಾರಿ ಸ್ವಾಗತಿಸಿದರು. ಪುಷ್ಪರಾಜ್ ಮುಕ್ಕ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಂಕ್ ಸೌಲಭ್ಯ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ: ಸದಾಶಿವ ಮೇತ್ರಿ
ಕಲಾ ಜಗತ್ತಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಿ