ಕನ್ನಡಪ್ರಭ ವಾರ್ತೆ ಮಂಡ್ಯ
ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ಮಂಡ್ಯದ ಹರಿಪ್ರಿಯ ಹೋಟೆಲ್ ಚಾಣಕ್ಯ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕ ಆರ್.ವಿ.ದೇವರಾಜುರವರಿಗೆ ಪುಷ್ಪ ನಮನ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆರ್.ವಿ.ದೇವರಾಜು ಅವರು ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿದ್ದಾಗ ಎಲ್ಲರ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದರು. ಎಸ್.ಎಂ.ಕೃಷ್ಣ ಅವರಿಗೆ ಚಾಮರಾಜಪೇಟೆ ಕ್ಷೇತ್ರ ಬಿಟ್ಟುಕೊಟ್ಟ ನಂತರ ಅವರಿಗೆ ರಾಜಕೀಯದಲ್ಲಿ ಮತ್ತೆ ಅವಕಾಶ ಸಿಗಲಿಲ್ಲ. ಆರ್.ವಿ.ದೇವರಾಜು ಅವರ ಪುತ್ರ ಯುವರಾಜ್ ರಾಜಕೀಯವಾಗಿ ಬೆಳೆಯಲು ಅವರ ಜೊತೆ ಇರುತ್ತೇನೆ ಎಂದು ಭರವಸೆ ನೀಡಿದರು.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಆರ್.ವಿ.ದೇವರಾಜು ಅವರು ಜನಪರ ಕಾಳಜಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದರು. ತಳಮಟ್ಟದಿಂದ ಹೋರಾಟ ನಡೆಸಿಕೊಂಡು ಬಂದಿದ್ದ ಅವರು ಸಾಮಾಜಿಕ ಕಳಕಳಿಯೊಂದಿಗೆ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು ಎಂದು ತಿಳಿಸಿದರು.
ಆರ್.ವಿ.ದೇವರಾಜು ಸುಪುತ್ರ ಯುವರಾಜ್ ಮಾತನಾಡಿ, ನಮ್ಮ ತಂದೆ ಕಾಂಗ್ರೆಸ್ ಕಟ್ಟಾಳು ರೀತಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು. ಎಲ್ಲರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದರು. ಅದನ್ನು ರಾಜ್ಯದಲ್ಲಿ ಉಳಿಸಿ, ಬೆಳೆಸಿಕೊಂಡು ಹೋಗಲು ಸರ್ವ ಪ್ರಯತ್ನ ಮಾಡುತ್ತೇವೆ. ಹುಟ್ಟು- ಸಾವು ನಡುವೆ ಮನುಷ್ಯ ಸಂಪಾದನೆ ಮಾಡುವುದು ಪ್ರೀತಿ, ವಿಶ್ವಾಸ ಮಾತ್ರ. ಮುಂದಿನ ದಿನಗಳಲ್ಲಿ ನನಗೆ ಅವಕಾಶ ಸಿಕ್ಕಾಗ ಮಂಡ್ಯದ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು
ನುಡಿ ನಮನ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ವಿಜಯಲಕ್ಷ್ಮೀ ಬಂಡಿಸಿದ್ದೇಗೌಡ, ಮನ್‌ಮುಲ್ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಶಿವಲಿಂಗೇಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಎಲ್.ಸಿ.ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.