ಉಡುಪಿ ಹೆದ್ದಾರಿಯಲ್ಲಿ ರಾಡಾರ್ ಕ್ಯಾಮೆರಾ ಅಳವಡಿಕೆ

KannadaprabhaNewsNetwork |  
Published : May 25, 2026, 03:00 AM IST
22ಕ್ಯಾಮೆರ | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮೆರಾಗಳು ಕಾರ್ಯಾಚರಣೆ ಆರಂಭಿಸಿವೆ.

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮೆರಾಗಳು ಕಾರ್ಯಾಚರಣೆ ಆರಂಭಿಸಿವೆ.ಹೆದ್ದಾರಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರನ್ನು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಿಂದಲೇ ನೇರವಾಗಿ ಮಾನಿಟರ್ ಮಾಡಿ, ದಂಡ ವಿಧಿಸುವ ಮೂಲಕ ಈ ಅಪರಾಧಗಳನ್ನು ತಡೆಯುವುದು ಈ ಯೋಜನೆಯಾಗಿದೆ. ಸದ್ಯಕ್ಕೆ 6 ಕಡೆ ಕ್ಯಾಮೆರಾ ಅಳವಡಿಸಲಾಗಿದ್ದು, ಇನ್ನೂ 14 ಕಡೆಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಟೆಂಡರ್ ಆಗಿದ್ದು, ಶ್ರೀಘ್ರದಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಹೈಟೆಕ್ ರಾಡಾರ್ ಕ್ಯಾಮೆರಾಗಳು ಕೇವಲ ಅತಿ ವೇಗವನ್ನು ಮಾತ್ರವಲ್ಲದೆ, ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವುದು, ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುವುದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡುವುದು, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ, ಒನ್-ವೇ ಅಥವಾ ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಮುಂತಾದ ಸಂಚಾರ ನಿಯಮ ಉಲ್ಲಂಘನೆಗಳನ್ನೂ ಪತ್ತೆಹಚ್ಚಲಿದೆ.

ಈ ಕ್ಯಾಮೆರಾಗಳು ಸಂಚಾರ ಉಲ್ಲಂಘನೆ ದೃಶ್ಯಗಳನ್ನು ನೇರವಾಗಿ ಕಂಟ್ರೋಲ್ ರೂಮ್‌ಗೆ ಕಳುಹಿಸುತ್ತದೆ. ಅಲ್ಲಿ ವಾಹನಗಳ ನಂಬರ್ ಪ್ಲೇಟ್‌ಗಳ ಮೂಲಕ ಮೂಲಕ ವಾಹನ ಚಾಲಕ-ಮಾಲೀಕರ ಮನೆಗೆ ಅಂಚೆ ಮೂಲಕ ದಂಡದ ಚಲನ್ ಗಳನ್ನು ಕಳುಹಿಸಲಾಗುತ್ತದೆ. ಚಲನ್ ಸ್ವೀಕರಿಸಿದ 7 ದಿನಗಳೊಳಗಾಗಿ ಯಾವುದೇ ಪೊಲೀಸ್ ಠಾಣೆಯಲ್ಲಿ ದಂಡದ ಮೊತ್ತವನ್ನು ಪಾವತಿಸಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛತೆ ಎನ್ನುವುದು ನಿರಂತರ ಹವ್ಯಾಸವಾಗಲಿ
ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಕ್ಕೆ ತೆರೆ