- ದೇಶ, ಅಂಬೇಡ್ಕರ್ ಬಗ್ಗೆ ಗೌರವವಿಲ್ಲದ ರಾಹುಲ್ ಗಾಂಧಿ: ಟೀಕೆ ।
- - -
ಕನ್ನಡಪ್ರಭ ವಾರ್ತೆ ಹೊನ್ನಾಳಿಸಂವಿಧಾನದ ಪುಸ್ತಕ ಸದಾ ಕೈಯಲ್ಲಿ ಹಿಡಿದು ಓಡಾಡುವ ರಾಹುಲ್ ಗಾಂಧಿ ಮತಗಳ್ಳತನವಾಗಿದೆ ಎಂದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇವರಿಗೆ ಅಂಬೇಡ್ಕರ್ ಬಗ್ಗೆಯಾಗಲಿ ಹಾಗೂ ದೇಶದ ಸಂವಿಧಾನದ ಬಗ್ಗೆಯಾಗಲಿ ಕಿಂಚಿತ್ತೂ ಗೌರವವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಟೀಕಿಸಿದರು.
ಜನವಿರೋಧಿ, ಸಂವಿಧಾನ ವಿರೋಧಿ ನೀತಿಯಿಂದ ಯಾವುದೇ ಕಾರಣಕ್ಕೂ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ದೇಶದ ಜನರ ಭಾವನೆಗಳನ್ನು, ಗಮನವನ್ನು ಬೇರೆಡೆಗೆ ಸೆಳೆಯಲು ಮತಗಳ್ಳತನದ ಆಧಾರರಹಿತ ಆರೋಪಗಳನ್ನು ಮಾಡುತ್ತ ರಾಹುಲ್ ಗಾಂಧಿಯವರು ಓಡಾಡುತ್ತಿದ್ದಾರೆ. ಸಾಧ್ಯವಾದರೆ ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಸಚಿವ ಮಹಾದೇವಪ್ಪ ಅವರು ನಾಡಿನ ರೈತರ ಜೀವನಾಡಿ ಕೆಆರ್‌ಎಸ್‌ಗೆ ಅಡಿಪಾಯ ಹಾಕಿದವರು ಟಿಪ್ಪುಸುಲ್ತಾನ್ ಎಂದು ಸತ್ಯಕ್ಕೆ ದೂರವಾದ ಹಾಗೂ ಆಸಂಬದ್ಧ ಹೇಳಿಕೆ ನೀಡಿದ್ದಾರೆ. ಆ ಮೂಲಕ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ. ಮಹಾದೇವಪ್ಪ ಅವರು ಮೊದಲು ನಾಡಿನ ಇತಿಹಾಸ ಸರಿಯಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ, ಮುಖಂಡ ಎಸ್.ಎಸ್. ಬೀರಪ್ಪ, ಸಿ.ಆರ್. ಶಿವಾನಂದ, ಕುಮಾರ ಸ್ವಾಮಿ, ವಿಎಸ್‌ಎಸ್‌ಎನ್ ನಿರ್ದೇಶಕ ರಮೇಶ್ ಗೌಡ, ಬಡಾವಣೆ ರಂಗಪ್ಪ ಇದ್ದರು.
(ಕೋಟ್) ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ನಡೆಯುತ್ತಿದೆ. ಇದನ್ನು ಬಿಟ್ಟು ಬೇರೆ ಯಾವುದೇ ಅಭಿವೃದ್ದಿ ಕೆಲಸಗಳನ್ನು ನಡೆಯುತ್ತಿಲ್ಲ. ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರನ್ನು ಓವರ್ ಟೇಕ್ ಮಾಡಿ ಶಾಸಕರ ಸಭೆ ನಡೆಸುತ್ತಾ ಸೂಪರ್ ಸಿಎಂ ತರಹ ವರ್ತಿಸುತ್ತಿದ್ದಾರೆ.
- - -
ಹೊನ್ನಾಳಿ ನಿವಾಸದಲ್ಲಿ ಸೋಮವಾರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.