ಕಿನ್ನಿಗೋಳಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನ

KannadaprabhaNewsNetwork |  
Published : Aug 31, 2026, 03:00 AM IST
ಕಿನ್ನಿಗೋಳಿಯಲ್ಲಿ  ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಧಾರ್ಮಿಕ ಸಭೆ | Kannada Prabha

ಸಾರಾಂಶ

ಶ್ರೀ ರಾಘವೇಂದ್ರ ಸ್ವಾಮೀಜಿಗಳು ಒರ್ವ ಯುಗಪುರುಷರಾಗಿದ್ದು, ಧಾರ್ಮಿಕತೆಯೆ ಜೊತೆಗೆ ಸಮಾಜದ ಅಭಿವೃದ್ಧಿಯ ಹರಿಕಾರರಾಗಿದ್ದರು. ಅವರ ಆರಾಧನೆ ಮಾಡುವುದು ಒಂದು ಯಜ್ಞದಂತೆ ಅದರ ಫಲ ಸಮಾಜಕ್ಕೆ ದೊರೆಯಬೇಕು ಎಂದು ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಮೋಹನ್‌ದಾಸ್‌ ಸುರತ್ಕಲ್‌ ಹೇಳಿದರು.

ಕನ್ನಡಪ್ರಭವಾರ್ತೆ ಮೂಲ್ಕಿ

ಶ್ರೀ ರಾಘವೇಂದ್ರ ಸ್ವಾಮೀಜಿಗಳು ಒರ್ವ ಯುಗಪುರುಷರಾಗಿದ್ದು, ಧಾರ್ಮಿಕತೆಯೆ ಜೊತೆಗೆ ಸಮಾಜದ ಅಭಿವೃದ್ಧಿಯ ಹರಿಕಾರರಾಗಿದ್ದರು. ಅವರ ಆರಾಧನೆ ಮಾಡುವುದು ಒಂದು ಯಜ್ಞದಂತೆ ಅದರ ಫಲ ಸಮಾಜಕ್ಕೆ ದೊರೆಯಬೇಕು ಎಂದು ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಮೋಹನ್‌ದಾಸ್‌ ಸುರತ್ಕಲ್‌ ಹೇಳಿದರು.

ಕಿನ್ನಿಗೋಳಿ ಯುಗಪುರುಷ ವಲಯದ ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿ ಮಂದಿರದಲ್ಲಿ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಕಸಾಪದ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂತ್ರಾಲಯದ ಗುರುಗಳು, ಕಾರಣಿಕ ಪುರುಷರಾಗಿದ್ದು, ಸಮಾಜಕ್ಕೆ ಸಾಕಷ್ಟುಸೇವೆ ಅವರಿಂದ ಸಂದಿದೆ ಪ್ರತಿನಿತ್ಯ ಅವರ ಆರಾಧನೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭ ಡಾ. ನಯನಾಭಿರಾಮ ಉಡುಪ, ನಿವೃತ್ತ ಶಿಕ್ಷಕ ಬಾಲಕೃಷ್ಣ ಉಡುಪ, ಆಳ್ವಾಸ್‌ ಕಾಲೇಜಿನ ಉಪನ್ಯಾಸಕ ಪು. ಗುರುಪ್ರಸಾದ್‌ ಭಟ್‌ ಮತ್ತಿತರರು ಉಪಸ್ಥಿತರಿದ್ದರು. ಯುಗಪುರುಷದ ಭುವನಾಭಿರಾಮ ಉಡುಪ ಸ್ವಾಗತಿಸಿದರು. ಬಳಿಕ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವದ ಅಂಗವಾಗಿ ಪಲ್ಲಕಿ ಉತ್ಸವ , ರಥೋತ್ಸವ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆ
ಅಪಸ್ಮಾರ ಶಾಪವಲ್ಲ, ಗುಣಪಡಿಸಲಾಗುವ ಖಾಯಿಲೆ: ಡಾ.ನಿಹಾಲ್ ಅಹಮದ್