ರಾಘವೇಂದ್ರ ಟ್ರಸ್ಟ್‌ ವಿದ್ಯಾಸಹಾಯಧನ ಹಸ್ತಾಂತರ

KannadaprabhaNewsNetwork |  
Published : Jun 02, 2026, 03:00 AM IST
01ಶೆಣೈ | Kannada Prabha

ಸಾರಾಂಶ

ಹೆಬ್ರಿ: ಇಲ್ಲಿನ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ 44000 ರು. ಮೊತ್ತದ ಚೆಕ್‌ನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರಿಗೆ ಹಸ್ತಾಂತರಿಸಲಾಯಿತು.

ಹೆಬ್ರಿ: ಇಲ್ಲಿನ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ 44000 ರು. ಮೊತ್ತದ ಚೆಕ್‌ನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭ ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಮುಖ್ಯಸ್ಥರಾದ ಡಾ. ರಾಮಚಂದ್ರ ಐತಾಳ್ , ಡಾ. ಭಾರ್ಗವಿ ಐತಾಳ್, ಪರಿಸರವಾದಿ ದಿನೇಶ್ ಹೊಳ್ಳ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಉಪಸ್ಥಿತರಿದ್ದರು. ಕಾಲೇಜಿಗೆ ಕುರ್ಚಿಗಳ ಕೊಡುಗೆ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ, ಉಪ ಪ್ರಾಂಶುಪಾಲ ಡಾ. ವಿಶ್ವನಾಥ್ ಪೈ, ಪಿಯು ಪ್ರಾಂಶುಪಾಲರಾದ ಮಾಲತಿ ದೇವಿ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸಾಹಿತಿ ಅಂಶುಮಾಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಒತ್ತು; ದಯಾನಂದ ಪೈ
ಶಿಕ್ಷಕರನ್ನೇ ಆತ್ಮೀಯವಾಗಿ ಸ್ವಾಗತಿಸಿ ಹೊಸ ಶೈಕ್ಷಣಿಕ ವರ್ಷದ ಸಂಭ್ರಮ!