ರಘುಪತಿ ಭಟ್ಟರು ಭ್ರಮೆಯಲ್ಲಿದ್ದಾರೆ: ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : May 28, 2024, 01:11 AM ISTUpdated : May 28, 2024, 12:44 PM IST
ವಿಜಯೇಂದ್ರ | Kannada Prabha

ಸಾರಾಂಶ

ರಘಪತಿ ಭಟ್ಟರಿಗೆ ಪಕ್ಷದಿಂದ ಯಾವತ್ತೂ ಅನ್ಯಾಯ ಆಗಿಲ್ಲ. ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಅವಕಾಶ ಸಿಗಬೇಕಾದವರು ಅನೇಕ ಮಂದಿ ನಮ್ಮ ಪಕ್ಷದಲ್ಲಿದ್ದಾರೆ, ಹಾಗಿರುವಾಗ ಅವಕಾಶ ಸಿಕ್ಕವರಿಗೆ ಮತ್ತೆ ಮತ್ತೆ ಅವಕಾಶ ಸಿಗಬೇಕು ಎನ್ನುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದರು.

  ಉಡುಪಿ : ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪಕ್ಷದಿಂದ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ತನ್ನ ಮೂಗಿನ ನೇರಕ್ಕೆ ಮಾತನಾಡುತ್ತಿದ್ದಾರೆ. ಅವರು ತಾನು ಗೆಲ್ಲುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘಪತಿ ಭಟ್ಟರಿಗೆ ಪಕ್ಷದಿಂದ ಯಾವತ್ತೂ ಅನ್ಯಾಯ ಆಗಿಲ್ಲ. ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಅವಕಾಶ ಸಿಗಬೇಕಾದವರು ಅನೇಕ ಮಂದಿ ನಮ್ಮ ಪಕ್ಷದಲ್ಲಿದ್ದಾರೆ, ಹಾಗಿರುವಾಗ ಅವಕಾಶ ಸಿಕ್ಕವರಿಗೆ ಮತ್ತೆ ಮತ್ತೆ ಅವಕಾಶ ಸಿಗಬೇಕು ಎನ್ನುವುದು ಸರಿಯಲ್ಲ. ಬಿಜೆಪಿ ಪಕ್ಷ, ಸಂಘಟನೆ ಬಲಿಷ್ಠವಾಗಿದೆ. ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು.

* ಸಚಿವರೂ ನೀಟ್ ಆಗಿರಬೇಕು

ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇರ್ ಸ್ಟೈಲ್ ಬಗ್ಗೆ ನಡೆದಿರುವ ವಾಕ್ ಸಮರದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರು ನೀಟ್ ಆಗಿ ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ. ಪಾಪ ಅದಕ್ಕೆ ಅವರು ಮನಸಿಗೆ ಬಹಳ ನೋವು ಮಾಡಿಕೊಂಡಂತಿದೆ. ನೋವು ಮಾಡಿಕೊಳ್ಳುವುದು ಬಿಟ್ಟು ಶಿಕ್ಷಣ ಕ್ಷೇತ್ರವನ್ನು ಉದ್ದಾರ ಮಾಡಲಿ ಎಂದರು.

ಕನ್ನಡ ಗೊತ್ತಿರುವವರು ಶಿಕ್ಷಣ ಸಚಿವರಾದರೆ ರಾಜ್ಯಕ್ಕೂ ಶಿಕ್ಷಣಕ್ಕೂ ಒಳಿತು. ಆದರೆ ಕನ್ನಡ ಬರುವುದಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಅವರು ಶಿಕ್ಷಣವನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗುತ್ತಾರೆ ಅನ್ನೋ ನಂಬಿಕೆ ನನಗೆ ಇಲ್ಲ ಎಂದವರು ಹೇಳಿದರು.

* ರಾಜ್ಯದ ಜನತೆಗೆ ಸಂಕಷ್ಟ

ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲ, ಇಡೀ ರಾಜ್ಯಾದಲ್ಲಿಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್‌ ಅಧಿಕಾರಿಗಳು, ಸರ್ಕಾರದ ಪ್ರತಿನಿಧಿಗಳು ತಮ್ಮ ಕರ್ತವ್ಯದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಯಾರು ಏನು ಬೇಕಾದರೂ ಮಾಡಬಹುದು ಅನ್ನೋ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟಿಕರಣದಿಂದ ರಾಜ್ಯದ ಜನ ಸಂಕಷ್ಟ ಪಡುತ್ತಿದ್ದಾರೆ ಎಂದವರು ಆರೋಪಿಸಿದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ