ಬ್ರಿಟಿಷ್‌ ಪೌರತ್ವದಿಂದಾಗಿ ರಾಹುಲ್‌ಗೆ ಎಸ್‌ಐಆರ್‌ ಭೀತಿ

KannadaprabhaNewsNetwork |  
Published : Oct 08, 2026, 02:45 AM IST
(ಫೋಟೊಬಿಕೆಟಿ7, ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬ್ರಿಟಿಷ್ ಪೌರತ್ವ ಹೊಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಸ್ಐಆರ್‌ನ ಭೀತಿ ಕಾಡುತ್ತಿದೆ. ಅದಕ್ಕಾಗಿಯೇ ಹೋರಾಟದ ಪ್ರಹಸನಗಳನ್ನು ನಡೆಸುತ್ತಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬ್ರಿಟಿಷ್ ಪೌರತ್ವ ಹೊಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಸ್ಐಆರ್‌ನ ಭೀತಿ ಕಾಡುತ್ತಿದೆ. ಅದಕ್ಕಾಗಿಯೇ ಹೋರಾಟದ ಪ್ರಹಸನಗಳನ್ನು ನಡೆಸುತ್ತಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜ್ಯೋತಿ ಯಾತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್‌ಐಆರ್‌ ಭೀತಿ ಕಾಡುತ್ತಿರುವುದು ರಾಹುಲ್ ಗಾಂಧಿಗೆ ಮಾತ್ರ. ಅರ್ಹ ಮತದಾರರು ಅದರಿಂದ ಹೊರಗುಳಿದಿಲ್ಲ. ರಾಹುಲ್ ಗಾಂಧಿ 1994ರಿಂದಲೂ ಬ್ರಿಟಿಷ್ ಪೌರತ್ವ ಹೊಂದಿದ್ದಾರೆ. ಆ ವಿಷಯ ಮುಚ್ಚಿಟ್ಟಿದ್ದಾರೆ. ಚುನಾವಣೆ ನಿಲ್ಲುವ ಸಂದರ್ಭದಲ್ಲಿ ಅವರು ಘೋಷಿಸಬೇಕಿತ್ತು. ಆದರೆ, ಅವರು ಘೋಷಿಸಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಈ ಎಲ್ಲ ಭೀತಿ ಹಿನ್ನೆಲೆಯಲ್ಲಿ ಅವರು ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ಮೇಲೆ ಗೂಭೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅನುಮಾನವಿದ್ದವರು ಫಾರಂ ನಂ.7 ಭರ್ತಿ ಮಾಡಬೇಕು. ಅದನ್ನು ಪರಿಶೀಲಿಸಿದಾಗ ಸರಿಯಿದ್ದರೆ ಒಪ್ಪಬಹುದು, ಇಲ್ಲದಿದ್ದರೆ ತಿರಸ್ಕರಿಸಬೇಕು. ಅದನ್ನು ಬಿಟ್ಟು ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರು ಚುನಾವಣಾ ಆಯೋಗಕ್ಕೆ ತೆರಳಿ ಬೆದರಿಕೆ ಹಾಕುವ ಪ್ರಯತ್ನ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಈ ಸರ್ಕಾರವನ್ನು ಅಮಾನತಿನಲ್ಲಿಡಬೇಕು. ಜ್ಞಾನೇಶಕುಮಾರ, ಮೋದಿಯಿದ್ದರೆ ಅದರ ಭಯ ರಾಹುಲ್ ಗಾಂಧಿಗೆ ಇದೆ, ಅದಕ್ಕಾಗಿಯೇ ಅವರು ಹೋರಾಟದ ನಾಟಕವಾಡುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನಾವು ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದರು.-------------

ಬಾಕ್ಸ್‌..........

ನಗರದಲ್ಲಿ ಭವ್ಯ ಜ್ಯೋತಿಯಾತ್ರೆ

ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ಸೇವೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಭವ್ಯ ಜ್ಯೋತಿಯಾತ್ರೆ ನಡೆಸಲಾಯಿತು.ನಗರದ ಹೊಳೆ ಆಂಜನೇಯ ದೇವಸ್ಥಾನದ ಬಳಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಪ್ರಧಾನಿ ಮೋದಿ ಅವರ ಭಾಷಣದ ನೇರಪ್ರಸಾರ ವೀಕ್ಷಿಸಲಾಯಿತು. ಭಾಷಣದ ನಂತರ ನಾಯಕರ ಸಮ್ಮುಖದಲ್ಲಿ ಕಾರ್ಯಕರ್ತರು 2047ರ ವಿಕಸಿತ ಭಾರತಕ್ಕಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ನಂತರ ಜ್ಯೋತಿ ಯಾತ್ರೆ ಹೊಳೆ ಆಂಜನೇಯ ದೇವಸ್ಥಾನದಿಂದ ಆರಂಭವಾಗಿ ಹಳೆ ಕಾಯಿಪಲ್ಲೆ ಮಾರುಕಟ್ಟೆ, ಕಿಲ್ಲಾ, ಎಂಜಿ ರಸ್ತೆ ಮೂಲಕ ಆಗಮಿಸಿ ಬಸವೇಶ್ವರ ವೃತ್ತದಲ್ಲಿ ಸಂಪನ್ನಗೊಂಡಿತು.

ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತರ, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ ಮಾಕನೂರ, ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ವಿಭಾಗ ಸಹಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರಮಠ, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿದ್ಯಾಧರ ಸವದಿ, ಮುಖಂಡರಾದ ಅಶೋಕ ಲಿಂಬಾವಳಿ, ಮೋಹನ ಜಾಧವ, ಶಿವಾನಂದ ಸುರಪುರ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12ರಂದು ದೆಹಲಿಯಲ್ಲಿ ಕಬ್ಬು ಬೆಳೆಗಾರರ ಸಭೆ
ತಾಪಂ: ಬೆಳಗಾವಿಯಲ್ಲಿ ಮಹಿಳೆಯರಿಗೆ ಸಿಂಹಪಾಲು