ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.
ರಾಹುಲ್ ಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಶಾಸಕಿ
ಕನ್ನಡಪ್ರಭ ವಾರ್ತೆ ಹರಪನಹಳ್ಳಿ
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ರಾಹುಲ್ ಗಾಂಧಿ ಜನ್ಮದಿನ ಉದ್ಘಾಟಿಸಿ ಮಾತನಾಡಿದರು.
ರಾಹುಲ್ ಗಾಂಧಿ ಏಳು, ಬೀಳು ಸಮಸ್ಯೆ ಕಷ್ಟ ಸಹಿಸಿಕೊಂಡು ಜನರ ಪರವಾಗಿ ಲೋಕಸಭೆಯಲ್ಲಿ ಕೆಲಸ ಮಾಡುತ್ತಿದ್ದು, ವಿಪಕ್ಷ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ದೇಶ ಇಂದು ಸಂಕಷ್ಟದ ಪರಿಸ್ಥಿತಿಯಲ್ಲಿದೆ, ಸಂವಿಧಾನ ಇಕ್ಕಟ್ಟಿನಲ್ಲಿದೆ, ದೇಶ ಹಾಗೂ ಸಂವಿಧಾನ ಉಳಿಸುವ ಸಲುವಾಗಿ ರಾಹುಲ್ ಗಾಂಧಿ ಸಾವಿರಾರು ಕಿಮೀ ಪಾದಯಾತ್ರೆ ಮಾಡಿದ್ದರು ಎಂದು ಹೇಳಿದರು.
ದೇಶದ ಭವಿಷ್ಯದ ಮುಂಚೂಣಿ ನಾಯಕ ಹಾಗೂ ಜನರ ಧ್ವನಿಯಾಗಿ ಲೋಕಸಭೆಯಲ್ಲಿ ಕೆಲಸ ಮಾಡುತ್ತಿರುವ ರಾಹುಲ್ ಗಾಂಧಿ ಕೈ ನಾವು ನೀವು ಬಲಪಡಿಸಬೇಕಿದೆ ಎಂದು ನುಡಿದರು.
ಕಾಂಗ್ರೆಸ್ ಮುಖಂಡ ಬಸವರಾಜ ಸಂಗಪ್ಪನವರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಗೌಡ, ಪುರಸಭಾ ಅಧ್ಯಕ್ಷೆ ಎಂ. ಫಾತೀಮಾಬಿ, ಪುರಸಭಾ ಹಿರಿಯ ಸದಸ್ಯ ಅಬ್ದುಲ್ ರಹಿಮಾನ್, ವಕೀಲರ ಸಂಘದ ಅಧ್ಯಕ್ಷ ಎಚ್.ವೆಂಕಟೇಶ, ಮತ್ತಿಹಳ್ಳಿ ಪಿ. ರಾಮಣ್ಣ ಮಾತನಾಡಿದರು.
ಈ ಸಂದರ್ಭ ಪೌರಕಾರ್ಮಿಕರು ಹಾಗೂ ನಿವೃತ್ತ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.