ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ, ಅವರ ಹಿಂದೆ ನಿಲ್ಲೋಣ: ಸಂತೋಷ್ ಲಾಡ್

KannadaprabhaNewsNetwork |  
Published : Oct 12, 2025, 01:02 AM IST
ರಾಹುಲ್ ಗಾಂಧಿಯ ಬೆನ್ನಿಗೆ ನಿಲ್ಲೋಣ : ಸಂತೋಷ್ ಲಾಡ್ ಕರೆ | Kannada Prabha

ಸಾರಾಂಶ

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಶುಕ್ರವಾರ ಸಂಜೆ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ. ಅವರು ಜನರ ಬಳಿಗೆ ಬಂದು ಸಮಸ್ಯೆ ಆಲಿಸುತ್ತಿದ್ದಾರೆ. ವೋಟ್ ಚೋರಿ ಸಹಿತ ಹಲವು ವಿಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ಅವರ ಬೆನ್ನ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು, ಜನರ ಬಳಿ ಮೋದಿ ಸರ್ಕಾರದ ವೈಫಲ್ಯಗಳನ್ನು ತಿಳಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಶುಕ್ರವಾರ ಸಂಜೆ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆವಹಿಸಿ ಮಾತನಾಡಿ, ಇಂದು ಮತಗಳ್ಳತನಕ್ಕೆ ಚುನಾವಣಾ ಆಯೋಗ ಉತ್ತರದಾಯಿತ್ವರಾಗಿದ್ದಾರೆ. ಮನಮೋಹನ್ ಸಿಂಗ್ ಅಧಿಕಾರವಧಿಯಲ್ಲಿ ಅನೇಕ ಕ್ಲಿಷ್ಟಕರ ಸನ್ನಿವೇಶಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗಿತ್ತು. ಇಂದು ಇಂಧನ ಬೆಲೆ ಅಂತಾರಾಷ್ಟ್ರೀಯ ಕಚ್ಚಾ ತೈಲಕ್ಕೆ ಕಡಿಮೆ ಆದರೂ ಕಡಿಮೆ ಆಗಿಲ್ಲ. ಕಪ್ಪು ಹಣ ವಾಪಸ್ ತಂದಿದ್ದೀರಾ ಎಂದು ಪ್ರಶ್ನಿಸಿದರು.ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ.ಗಫೂರ್, ಬೀಜ ಮತ್ತು ಸಾವಯವ ನಿಗಮ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಜ್ ಬಡಕಬೈಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಮುಖಂಡರಾದ ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ, ಪದ್ಮನಾಭ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಐಡಾ ಸುರೇಶ್ ಸಹಿತ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ನಾರಾಯಣಗುರು ಸರ್ಕಲ್ ವರೆಗೆ ಸಾಗಿ, ನಂತರ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಎದುರು ಸಾರ್ವಜನಿಕ ಸಭೆ ನಡೆಯಿತು.

PREV

Recommended Stories

ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ