ದಾಬಸ್‍ಪೇಟೆ: ತ್ಯಾಮಗೊಂಡ್ಲು ಪಟ್ಟಣದ ವಿವಿಧ ಮಳಿಗೆ, ಗೋದಾಮುಗಳ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಪಂ ಅಧಿಕಾರಿಗಳ ತಂಡ ದಾಳಿ ಮಾಡಿ 250 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡು, 8500 ರು. ದಂಡ ವಿಧಿಸಿದ್ದಾರೆ.
ತ್ಯಾಮಗೊಂಡ್ಲು ಗ್ರಾಪಂ ಪಿಡಿಒ ರೇಖಾ ಮಾತನಾಡಿ, ಪಟ್ಟಣದಲ್ಲಿ ಪ್ರತಿನಿತ್ಯ ಕಸ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಕಸ ವಿಂಗಡಣೆ ಹಾಗೂ ಪ್ಲಾಸ್ಟಿಕ್ ಬಳಕೆಯಲ್ಲಿ ಸಾರ್ವಜನಿಕರ ನಿರ್ಲಕ್ಷ್ಯವಿದೆ. ಇದರಿಂದ ಶುಚಿತ್ವ ಕಾಪಾಡಲು ಸಾಧ್ಯವಿಲ್ಲ. ಅಧಿಕಾರಗಳ ಜೊತೆಯಲ್ಲಿ ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಯೋಜನೆ ಯಶಸ್ವಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸಿಬ್ಬಂದಿಗಳಾದ ದೊಡ್ಡೇಗೌಡ, ರೇವಣ್ಣ, ವರುಣ್, ಬಸವರಾಜು, ಪೊಲೀಸ್ ಇಲಾಖೆ ರಘು, ಗ್ರಾಪಂ ಕಾರ್ಯದರ್ಶಿ ನಾಗರತ್ನಮ್ಮ, ಸಿಬ್ಬಂದಿಗಳಾದ ಗಂಗಾಧರ್ ಇತರರಿದ್ದರು.ಪೋಟೋ 3 :
ತ್ಯಾಮಗೊಂಡ್ಲು ಪಟ್ಟಣದಲ್ಲಿ ಅಂಗಡಿಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.