ನರಸಿಂಹರಾಜಪುರ: ಹಳೇ ಪೇಟೆ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಮೀಪದ ಅಂಗಡಿಗಳ ಮೇಲೆ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸೇವೆಗಳ ನಿರ್ದೇಶನಾಲಯದ ಅಧಿಕಾರಿಗಳ ತಂಡವು ದಾಳಿ ಮಾಡಿ 9 ಪ್ರಕರಣ ದಾಖಲಿಸಿ 2800 ರುಪಾಯಿ ದಂಡ ವಿಧಿಸಲಾಯಿತು. 18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಹಾಗೂ ತಂಬಾಕಿನ ಉತ್ಪನ್ನ ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಯಿತು. ದಾಳಿಯ ಸಂದರ್ಭದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್, ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೆಬಾಸ್ಟಿನ್, ಪೊಲೀಸ್ ಕಾನ್ಸೇಟೇಬಲ್ ಚಂದ್ರಕಾಂತ್ ಇದ್ದರು.