ಹೋಟೆಲ್, ಬೇಕರಿ, ಬಾರ್‌ಗಳ ಮೇಲೆ ದಾಳಿ: ಪ್ರಕರಣ ದಾಖಲು

KannadaprabhaNewsNetwork |  
Published : Sep 12, 2026, 01:30 AM IST
ತಿಪಟೂರು ನಗರದ ಹೋಟೆಲ್, ಬೇಕರಿ ಹಾಗೂ ಬಾರ್‌ಗಳ ಮೇಲೆ ದಾಳಿ, ಪ್ರಕರಣಗಳು ದಾಖಲು  | Kannada Prabha

ಸಾರಾಂಶ

ನಗರದ ಹೋಟೆಲ್‌ಗಳಲ್ಲಿ ಸ್ವಚ್ಛತೆಯ ಲೋಪ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸಿದ ಹೋಟೆಲ್, ಡಾಬಾ, ಬಾರ್ ಮತ್ತು ಬೇಕರಿಗಳ ಮೇಲೆ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಲಾಗಿದೆ.

ಕನ್ನಡಪ್ರಭ ವಾರ್ತೆ ತಿಪಟೂರು

ನಗರದ ಹೋಟೆಲ್‌ಗಳಲ್ಲಿ ಸ್ವಚ್ಛತೆಯ ಲೋಪ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸಿದ ಹೋಟೆಲ್, ಡಾಬಾ, ಬಾರ್ ಮತ್ತು ಬೇಕರಿಗಳ ಮೇಲೆ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಲಾಗಿದೆ.

ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತಾಲೂಕು ಆರೋಗ್ಯ ಇಲಾಖೆ, ನಗರಸಭೆ ಹಾಗೂ ನಗರ ಠಾಣೆ ಪೊಲೀಸರು ಜಂಟಿಯಾಗಿ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಬಾರ್, ನಕ್ಷತ್ರ ಬಾರ್, ಬೃಂದಾವನ ಡಾಬಾ ಹಾಗೂ ಎಸ್.ಎಸ್. ಬೇಕರಿ ಸೇರಿದಂತೆ ಹಲವು ಕಡೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ಸ್ವಚ್ಛತೆಯ ಕೊರತೆ ಮತ್ತು ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಿದ್ದಾರೆ.ದಾಳಿಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿ ಡಾ. ಚನ್ನಕೇಶವ, ನಗರದ ಹೋಟೆಲ್ ಮತ್ತು ಬಾರ್‌ಗಳು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಮಾತನಾಡಿದ ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬಗರಗಡೆ, ಹೋಟೆಲ್ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸಬಾರದು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಈ ಜಂಟಿ ಕಾರ್ಯಾಚರಣೆಯಲ್ಲಿ ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪಂಚಾಕ್ಷರಿ, ಆರೋಗ್ಯ ನಿರೀಕ್ಷಕರಾದ ಜಯರಾಮ, ಸಚಿನ್, ಶ್ರೀನಿವಾಸ, ಪಲ್ಲವಿ ಸೇರಿದಂತೆ ಮೂರೂ ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ನಗರದಲ್ಲಿ ಸ್ವಚ್ಛತೆ ಕಾಪಾಡದ ವ್ಯಾಪಾರಿಗಳಿಗೆ ಅಧಿಕಾರಿಗಳು ನೀಡಿದ ಈ ಶಾಕ್ ಸದ್ಯ ಇತರ ವ್ಯಾಪಾರಿಗಳಲ್ಲೂ ನಡುಕ ಹುಟ್ಟಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಾರಿಗೆ ಬಸ್‌ ಸಮಯ ಬದಲಿಸಲು ಆಗ್ರಹಿಸಿ ಧರಣಿ
ಹುತಾತ್ಮ ಅರಣ್ಯ ಅಧಿಕಾರಿಗಳ ತ್ಯಾಗ ಅಮೋಘ