ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದ್ದು, ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ
ಕನ್ನಡಪ್ರಭ ವಾರ್ತೆ ಮೈಸೂರು
ಚಾಮುಂಡಿಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ, ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೂರಿದರು.ಮೈಸೂರು ವಿವಿ- ಕುಕ್ಕರಹಳ್ಳಿಕೆರೆ ನಡುವಿನ ಜಂದಕ್ಷನ್ ನಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಜಾಗವನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದ್ದು, ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದೆ. ಆದರೆ, ಇಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಅಧಿಕಾರಿಗಳು ಕಿವಿ ಕೊಡುತ್ತಿಲ್ಲ. ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.--- ಪರಿಸರಕ್ಕೆ ಧಕ್ಕೆಯಾಗದಂತೆ ಕ್ರಮಮೈಸೂರು ವಿವಿ- ಕುಕ್ಕರಹಳ್ಳಿಕೆರೆ ನಡುವಿನ ಜಂರಕ್ಷನ್ ನಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣದ ವೇಳೆ ಪರಿಸರಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿ ನಡೆಯುವ ಸ್ಥಳದಲ್ಲಿರುವ ಎಲ್ಲಾ ಮರಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.ಮೈಸೂರು- ಬೆಂಗಳೂರು ಹೈವೇಯ ಮಣಿಪಾಲ್‌ಜಂುಕ್ಷನ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಭಾಗದಲ್ಲಿರುವ ಸುಮಾರು 40 ಮರಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಇನ್ನು ಮುಂದೆ ಯಾವುದೇ ಕಾಮಗಾರಿ ನಡೆಸಿದರೂ ಪರಿಸರಕ್ಕೆ ಮಾರಕವಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.ಈ ವೇಳೆ ಅಧಿಕಾರಿಗಳು ಮತ್ತು ಮುಖಂಡರು ಇದ್ದರು.----ಬಾಕ್ಸ್.... ನಗರದಲ್ಲಿ ಎಲ್ಲೆಂದರಲ್ಲಿ ಅವೈಜ್ಞಾನಿಕ ಸಿಗ್ನಲ್ ಲೈಟ್- ಕಿಡಿ
ನಗರದ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುಮತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಸಂಸದ ಯದುವೀರ್‌ಒಡೆಯರ್‌ಕಿಡಿಕಾರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.