ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ: ತಂಪಾದ ವಾತಾವರಣ

KannadaprabhaNewsNetwork |  
Published : Oct 24, 2026, 02:30 AM IST
ಹಾನಗಲ್ಲ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಅಕಾಲಿಕ ಮಳೆ ಸುರಿಯಿತು. | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ತಂಪಾದ ವಾತಾವರಣ ನಿರ್ಮಾಣವಾಯಿತು. ಕಳೆದ ಕೆಲವು ದಿನಗಳಿಂದ ಬಿಸಿಲು ಹಾಗೂ ಉಷ್ಣತೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿತು.

ಹಾವೇರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ತಂಪಾದ ವಾತಾವರಣ ನಿರ್ಮಾಣವಾಯಿತು. ಕಳೆದ ಕೆಲವು ದಿನಗಳಿಂದ ಬಿಸಿಲು ಹಾಗೂ ಉಷ್ಣತೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿತು.ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಮಳೆ ಕೆಲಕಾಲ ಜೋರಾಗಿ ಸುರಿಯಿತು. ಬಳಿಕ ಸಂಜೆವರೆಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಜಿಟಿಜಿಟಿ ಮಳೆ ಸುರಿಯಿತು. ಕೆಲವೆಡೆ ಗುಡುಗು ಸಹಿತ ಮಳೆಯಾದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಮುಂದುವರಿಯಿತು. ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿದ ಮಳೆಯಿಂದ ವಾತಾವರಣ ತಂಪಾಯಿತು.ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಕೇಂದ್ರಕ್ಕೆ ತೆರಳಲು ಮಳೆಯಿಂದ ಕೆಲಕಾಲ ಅಡ್ಡಿಯಾಯಿತು.

ತಂಪೆರೆದ ಮಳೆ: ಹಾನಗಲ್ಲ ತಾಲೂಕಿನಲ್ಲಿ ಹಲವು ದಿನಗಳಿಂದ ಬಿಸಿಲಿನ ಝಳಕ್ಕೆ ಕಾದಿದ್ದ ಭೂಮಿಗೆ ಮಳೆ ತಂಪೆರೆದಿದೆ. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದ್ದು, ಜನರಿಗೆ ಬಿಸಿಲಿನ ಬೇಗೆಯಿಂದ ತಾತ್ಕಾಲಿಕ ನೆಮ್ಮದಿ ನೀಡಿದೆ.

ತಾಲೂಕಿನ ವಿವಿಧೆಡೆ ಮೋಡ ಕವಿದ ವಾತಾವರಣದ ನಡುವೆ ಸುರಿದ ಮಳೆಯಿಂದ ಧೂಳುಮಯವಾಗಿದ್ದ ರಸ್ತೆಗಳು ತೊಯ್ದು, ವಾತಾವರಣದಲ್ಲಿ ತಂಪು ಆವರಿಸಿದೆ. ಮಳೆಯ ಆಗಮನದಿಂದ ಬಿಸಿಲಿನ ತಾಪಕ್ಕೆ ಬಳಲಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಆದರೆ, ಮಳೆ ರೈತರಲ್ಲಿ ಆತಂಕವನ್ನೂ ಮೂಡಿಸಿದೆ. ಕಟಾವಿಗೆ ಬಂದಿರುವ ಭತ್ತ, ಗೋವಿನಜೋಳ ಸಂರಕ್ಷಣೆಗೆ ರೈತರು ಪರದಾಡುವ ಸಂದಿಗ್ಧತೆಯನ್ನು ಮಳೆ ತಂದೊಡ್ಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆ ಕೊರತೆ, ತೊಗರಿ ಬೆಳೆಗಾರ ಕಂಗಾಲು
ಚಿರತೆ ಉಗುರು ಸಂಗ್ರಹಿಸಿಟ್ಟ ಆರೋಪಿ ಬಂಧನ