ರಸ್ತೆಯ ತಗ್ಗು ಮತ್ತು ಗುಂಡಿಗಳಲ್ಲಿ ನೀರು ಹರಿಯಿತು. ಬಿಸಿಲಿಗೆ ಕಾದಿದ್ದ ಧರೆಯು ಮಳೆ ಸಿಂಚನದಿಂದ ತಣ್ಣಗಾಯಿತು.
ಚಾಮರಾಜನಗರ: ಮಳೆ ಇಲ್ಲದೆ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ನಗರದಲ್ಲಿ ಗುರುವಾರ ಸಂಜೆ ಮಳೆ ಸುರಿದು ಜನತೆಯಲ್ಲಿ ಸಂತಸ ತಂದಿದೆ. ಕಳೆದ ವಾರದಿಂದ ಬಿಸಿಲಿನ ತೀವ್ರತೆಯಿಂದ ಕಾದ ಬಾಣಲಿಯಂತಾಗಿದ್ದ ಧರೆಗೆ ಮಳೆ ತಂಪನ್ನೆರೆಯಿತು. ಮಳೆ ಇಲ್ಲದೆ ಬರದಿಂದ ತತ್ತರಿಸಿರುವ ಬಿಸಿಲ ಧಗೆ ಮಿತಿ ಮೀರಿತ್ತು. ಉಷ್ಣಾಂಶ ಹೆಚ್ಚಾಗಿ ಹಗಲಲ್ಲಿ ಹೊರಗಡೆ ಓಡಾಡಲಾಗದಷ್ಟು ಬಿಸಿ ಇತ್ತು. ಗುರುವಾರ ಸಂಜೆ ಸುರಿದ
ವರುಣನ ಕೃಪೆಗೆ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಏಕಾಏಕಿ ಸುರಿದ ಮಳೆಯಿಂದ ತಪ್ಪಿಸಿಕೊಳ್ಳಲು ಜನ ಪರದಾಡಿದರು. ದ್ವಿಚಕ್ರ ವಾಹನಗಳ ಸವಾರರು ಮಳೆಯಲ್ಲಿ ಸಂಚರಿಸಿದರು. ರಸ್ತೆಯ ತಗ್ಗು ಮತ್ತು ಗುಂಡಿಗಳಲ್ಲಿ ನೀರು ಹರಿಯಿತು. ಬಿಸಿಲಿಗೆ ಕಾದಿದ್ದ ಧರೆಯು ಮಳೆ ಸಿಂಚನದಿಂದ ತಣ್ಣಗಾಯಿತು. ಜಿಲ್ಲೆಯಲ್ಲಿ ಮಳೆಗಾಗಿ ರೈತರು ಸಲ್ಲಿಸಿದ್ದ ಪೂಜೆ ಹಾಗೂ ಪ್ರಾರ್ಥನೆಗೆ ಕಡೆಗೂ ಮಳೆ ಕೃಪೆಯಾಯಿತು. ಮಳೆಯಿಂದಾಗಿ ಕೆಲಕಾಲ ವಿದ್ಯುತ್ ವ್ಯತ್ಯಯವಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.