ಮಳೆ ಹಾನಿ ಪರಿಹಾರ: ತಕ್ಷಣ ಕ್ರಮಕ್ಕೆ ಸೂಚನೆ

KannadaprabhaNewsNetwork |  
Published : May 27, 2025, 12:47 AM ISTUpdated : May 27, 2025, 12:48 AM IST
ಸಭೆ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಸೀಲ್ದಾರರಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು.ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೦ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ 330 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ ಮಾಡಬೇಕೆಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ನೀರಿನ ಗುಣಮಟ್ಟದಲ್ಲಿ ನಿರಂತರ ನಿಗಾವಹಿಸುವ ಅಗತ್ಯವಿದೆ ಎಂದು ತಿಳಿಸಿದರು.ಬೆಂಗಳೂರು ನಗರದಲ್ಲಿ ಇತ್ತೀಚಿಗೆ ೫೩ ಕೋವಿಡ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಅಧಿಕಾರಿಗಳು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಬೆಂಗಳೂರಿಗೆ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ತುಮಕೂರು ಜಿಲ್ಲೆಯಿಂದ ದಿನವೂ ಅನೇಕ ಮಂದಿ ಉದ್ಯೋಗ, ವ್ಯವಹಾರ ಹಾಗೂ ಇತರ ಕಾರಣಗಳಿಗಾಗಿ ಬೆಂಗಳೂರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಹಸೀಲ್ದಾರರು ಕೋವಿಡ್ ನಿಯಂತ್ರಣದ ಮೇಲೆ ಹೆಚ್ಚು ಗಮನಹರಿಸಬೇಕೆಂದು ಸೂಚನೆ ನೀಡಿದರು. ಗ್ರಾಮಾಂತರ ಮಟ್ಟದಲ್ಲಿಯೂ ಎಚ್ಚರಿಕಾ ಕ್ರಮವಾಗಿ ಗ್ರಾಮ ಪಂಚಾಯತಿಯಲ್ಲಿ ರಚಿಸಲಾಗಿರುವ ಕೋವಿಡ್ ಕಾರ್ಯಪಡೆಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಹಳ್ಳಿಗಳಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಪೈಪ್‌ಲೈನ್‌ಗಳ ಅಳವಡಿಕೆ ಸಂದರ್ಭದಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಹೆಚ್ಚಿನ ಗಮನ ಹರಿಸಬೇಕು. ಚರಂಡಿಗಳಲ್ಲಿ ಮಳೆ ನೀರು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ