
- ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಕನ್ನಡ ಪ್ರಭ ವಾರ್ತೆ ಚಿಕ್ಕಮಗಳೂರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಹವಾಮಾನ ಆಧಾರಿತ ಬೆಳೆ ವಿಮೆ, ಮಳೆ ಮಾಪನ ಕೇಂದ್ರಗಳ ಸಮರ್ಥಕ ನಿರ್ವಹಣೆ ಮತ್ತು ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿ ಮಲೆನಾಡು ಭಾಗದಲ್ಲಿ ನಾವು ಎಲ್ಲೇ ಹೋದರು ರೈತರು ನಮಗೆ ಬೆಳೆ ವಿಮೆ ಬಂದಿಲ್ಲ ಎಂದು ಪ್ರಶ್ನೆ ಮಾಡುತ್ತಾರೆ.
ಕಳಸದಲ್ಲಿ ಮಳೆ ಮಾಪನ ಕೇಂದ್ರ ಅಳವಡಿಕೆ ಮಾಡಲಾಗಿದೆ. ಅಲ್ಲಿ ಕೆಲವೇ ಕಿ.ಮೀ ದೂರದಲ್ಲಿರುವ ಹೊರನಾಡಿನಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ. ಕಳಸದ ಮಳೆಮಾಪನ ಕೇಂದ್ರದ ಮಾಹಿತಿ ಆಧರಿಸಿ ಆ ಭಾಗದ ರೈತರಿಗೆ ಬೆಳೆ ವಿಮೆ ಪಾವತಿಸು ವುದಾದರೆ ಹೊರನಾಡು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಕಳೆದುಕೊಂಡ ರೈತರಿಗೆ ಅನ್ಯಾಯವಾಗುತ್ತದೆ. ಇದನ್ನೇ ಎಲ್ಲಾ ಭಾಗದ ರೈತರು ನನಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಮಳೆ ಮಾಪನ ಕೇಂದ್ರಗಳ ಮಾಹಿತಿ ಆಧರಿಸಿಯೇ ರೈತರಿಗೆ ಬೆಳೆ ವಿಮೆ ಪಾವತಿಯಾಗುತ್ತದೆ. ಮಳೆ ಮಾಪನ ಕೇಂದ್ರಗಳೇ ಸರಿಯಾಗಿ ಕಾರ್ಯನಿರ್ವಹಿಸದೇ ಇದ್ದಾಗ ರೈತರಿಗೆ ಬೆಳೆ ವಿಮೆ ಬರುವುದಿಲ್ಲ. ಇದನ್ನೇ ಆಧಾರವಾಗಿಟ್ಟುಕೊಂಡು ರೈತರು ಗ್ರಾಹಕ ನ್ಯಾಯಾಲಯದ ಮೊರೆ ಹೋದರೆ ಗತಿ ಏನು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಜಿಲ್ಲೆಯಲ್ಲಿರುವ 242 ಮಳೆಮಾಪನ ಕೇಂದ್ರಗಳಲ್ಲಿ 107 ಕೇಂದ್ರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಆರು ಕೇಂದ್ರಗಳಿಗೆ ನೆಟ್ವರ್ಕ್ ಸಮಸ್ಯೆ ಇದೆ. ಉಳಿದ 129 ಕೇಂದ್ರಗಳು ದುರಸ್ತಿಯಾಗಬೇಕಿದೆ. ಈಗಾಗಲೇ ಮಳೆಮಾಪನ ಕೇಂದ್ರಗಳ ದುರಸ್ತಿ ಆರಂಭವಾಗಿದೆ ಎಂದು ವಿವರಿಸಿದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳಾ ಸಭೆಗೆ ಮಾಹಿತಿ ನೀಡಿ 2024-25ನೇ ಸಾಲಿನಲ್ಲಿ ಬೆಳೆ ವಿಮೆಗಾಗಿ ಜಿಲ್ಲೆಯಲ್ಲಿ 39,509 ಮಂದಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 37,131 ಅರ್ಜಿದಾರರಿಗೆ ₹98 ಕೋಟಿ ಬೆಳೆ ವಿಮೆ ಪಾವತಿ ಯಾಗಿದೆ. ಕೆಲ ಮಳೆ ಮಾಪನ ಕೇಂದ್ರಗಳ ಸಮಸ್ಯೆಯಿಂದ ಕೆಲವರಿಗೆ ಬೆಳೆ ಪರಿಹಾರ ವಿತರಣೆಯಾಗಿಲ್ಲ. ಈ ಬಾರಿ ಎಲ್ಲಾ ಸಮಸ್ಯೆ ಬಗೆಹರಿಸಿ ರೈತರಿಗೆ ನ್ಯಾಯಯುತವಾಗಿ ಬೆಳೆ ವಿಮೆ ಬರುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.-- ಕೋಟ್....
ಕೋಟ ಶ್ರೀನಿವಾಸ ಪೂಜಾರಿ, ಸಂಸದ, ಉಡುಪಿ ಚಿಕ್ಕಮಗಳೂರು(ಫೋಟೋಇದೆ)