ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕು

KannadaprabhaNewsNetwork |  
Published : Oct 25, 2026, 02:45 AM IST
ಚಿತ್ರ : 3ಎಂಡಿಕೆ6 : ಕುಶಾಲನಗರದ ಸುರಿದ ಮಳೆ.  | Kannada Prabha

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ.

ಮಳೆಯಿಂದಾಗಿ ಜಲ ಮೂಲಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕಾವೇರಿ ನದಿಯಲ್ಲಿ ಕೂಡ ನೀರಿನ ಹರಿವು ಹೆಚ್ಚಾಗಿದೆ. ಈ ಬಾರಿ ಮುಂಗಾರು ಮಳೆ ಕಡಿಮೆಯಾಗಿದ್ದು, ಇದೀಗ ಕಳೆದ ಎರಡು ಮೂರು ದಿನಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಉತ್ತಮ ಮಳೆಯಾಗುತ್ತಿದೆ.

ಇದೀಗ ಭಾರಿ ಮಳೆಯಾದರೆ ಕಾಫಿ ಫಸಲಿಗೆ ಹಾನಿ ಉಂಟಾಗುವ ಸಾಧ್ಯತೆಗಳಿದೆ ಎಂದು ಕಾಫಿ ಬೆಳೆಗಾರರು ಚಿಂತಿತರಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರಳತೆ, ಸಜ್ಜನಿಕೆ, ಅಪಾರ ಪಾಂಡಿತ್ಯದ ಅಪರೂಪದ ಸಂಗಮ ಪುಣಿಂಚತ್ತಾಯ: ಸಲೀಂ ಅಹ್ಮದ್
ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವುದಷ್ಟೇ ಅಂತಿಮ ಗುರಿಯಲ್ಲ: ಪ್ರೊ. ಜಗದೀಶ್ ಕುಮಾರ್