ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮಳೆ ಪ್ರಮಾಣ ಕಡಿಮೆಯಾಗಿತ್ತು. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮಳೆ ಪ್ರಮಾಣ ಕಡಿಮೆಯಾಗಿತ್ತು. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು.
ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ನೀರಿನ ಹರಿವು ಹೆಚ್ಚಿದ ಪರಿಣಾಮ ತ್ರಿವೇಣಿ ಸಂಗಮದ ಉದ್ಯಾನವನ ಸಂಪೂರ್ಣ ಜಲಾವೃತಗೊಂಡಿದ್ದು, ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೂ ನೀರು ನುಗ್ಗಿದೆ. ಮಳೆಯಿಂದಾಗಿ ವಿರಾಜಪೇಟೆ ಸಮೀಪದ ಮೈತಾಡಿ ಚಾಮಿಯಾಳ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ವಿರಾಜಪೇಟೆ ಹೋಬಳಿ ಅರಮೇರಿ-ಚಾಮಿಯಾಲ ಸಂಪರ್ಕ ಸೇತುವೆಯು ಸಂಪೂರ್ಣ ಜಲಾವೃತವಾಗಿದ್ದು ರಸ್ತೆಯ ಮೇಲೆ ಸಾರ್ವಜನಿಕರು ಓಡಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಹಾಕಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.45 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 87.75 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 50.08 ಮಿ.ಮೀ.,ಪೊನ್ನಂಪೇಟೆ ತಾಲೂಕಿನಲ್ಲಿ 93.47 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 56.25 ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ 14.70 ಮಿ.ಮೀ. ಮಳೆಯಾಗಿದೆ.
ಹೋಬಳಿವಾರು ವಿವರ: ಮಡಿಕೇರಿ 52, ನಾಪೋಕ್ಲು 59.80, ಸಂಪಾಜೆ 72, ಭಾಗಮಂಡಲ 167.20, ವಿರಾಜಪೇಟೆ 56.60, ಅಮ್ಮತ್ತಿ 45, ಹುದಿಕೇರಿ 83, ಶ್ರೀಮಂಗಲ 48.80, ಪೊನ್ನಂಪೇಟೆ 185, ಬಾಳೆಲೆ 57.09, ಸೋಮವಾರಪೇಟೆ 44, ಶನಿವಾರಸಂತೆ 43, ಶಾಂತಳ್ಳಿ 83, ಕೊಡ್ಲಿಪೇಟೆ 55, ಕುಶಾಲನಗರ 10.40, ಸುಂಟಿಕೊಪ್ಪ 19 ಮಿ.ಮೀ.ಮಳೆಯಾಗಿದೆ. ಹಾರಂಗಿ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2838.68 ಅಡಿಗಳು. ಇಂದಿನ ನೀರಿನ ಒಳಹರಿವು 2090 ಕ್ಯುಸೆಕ್, ಹೊರ ಹರಿವು ನದಿಗೆ 180 ಕ್ಯುಸೆಕ್.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.