ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಾತನಾಡಿದರು.
ಮಳೆ ಹಿನ್ನೆಲೆಯಲ್ಲಿ ಅಗ್ನಿಶಾಮಕ, ಚೆಸ್ಕಾಂ, ಅರಣ್ಯ, ತಹಸೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳು 24*7 ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸ್ಥಾಪಿಸಬೇಕು ಹಾಗೂ ಸಾರ್ವಜನಿಕರು ಸಂಪರ್ಕಿಸಬೇಕಿರುವ ದೂರವಾಣಿ ಸಂಖ್ಯೆ ಮಾಹಿತಿ ನೀಡಬೇಕು ಎಂದರು.ಅಗ್ನಿ ಶಾಮಕ ಇಲಾಖೆಗಳು ಅತಿವೃಷ್ಟಿ ವೇಳೆ ಬೇಕಿರುವ ಬೋಟ್, ಲೈಫ್ ಜೆಕಾಟ್ ಸೇರಿದಂತೆ ಇನ್ನಿತರೆ ಪರಿಕರಗಳು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಸ್ಥಳೀಯ ನುರಿತ ಈಜುಗಾರರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು ಎಂದರು.
ಅರಣ್ಯ ಇಲಾಖೆಯಿಂದ ದುರ್ಬಲ ಮರ ಹಾಗೂ ಮರದ ಕೊಂಬೆಗಳು ನಿಯಮಾನುಸಾರ ತೆರವುಗೊಳಿಸಬೇಕು. ವಿದ್ಯುತ್ ತಂತಿಗಳು ಮರಗಳ ಮೇಲಿದ್ದರೆ ಯಾವುದೇ ತೊಂದರೆಯಾಗದಂತೆ ಸೆಸ್ಕ್ ಇಲಾಖೆಯ ಸಮನ್ವಯದೊಂದಿಗೆ ತೆರವುಗೊಳಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳು ಮಳೆ ಹಾನಿಯಾದ ನಂತರ ಕ್ರಮ ಕೈಗೊಳ್ಳುವುದಲ್ಲ. ಮೊದಲೇ ಕ್ರಮ ಕೈಗೊಂಡರೆ ಬಹಳಷ್ಟು ಹಾನಿ ತಡೆಗಟ್ಟಬಹುದು. ಆದರಿಂದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಬೇಕು ಎಂದು ಎಚ್ಚರಿಸಿದರು.
ಅತಿವೃಷ್ಟಿ ಸಂದರ್ಭದಲ್ಲಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ಇಲಾಖೆ ಅವರು ಕಾರ್ಯಾಗಾರ ಆಯೋಜಿಸಬೇಕು ಎಂದು ಡೀಸಿ ಸೂಚನೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ:ಮೋಹನ್ , ಕೆ.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕ ನಾಗರಾಜು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಸಲಹೆ
ಡಿಎಪಿ ರಸಗೊಬ್ಬರ ಬಳಸುವ ಬದಲಿಗೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸುವ ಸಂಯುಕ್ತ ರಸಗೊಬ್ಬರ ಬಳಸಿದಲ್ಲಿ ಅಧಿಕ ಇಳುವರಿ ಪಡೆಯಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಉತ್ತಮವಾಗಿ ಮುಂಗಾರು ಪೂರ್ವ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಬೆಳೆಗಳಿಗೆ ಯೂರಿಯಾ ಮತ್ತು ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಇವುಗಳಲ್ಲಿ ಕೇವಲ ಸಾರಜನಕ ಮತ್ತು ರಂಜಕದ ಅಂಶ ಮಾತ್ರ ಇರುತ್ತದೆ. ಆದರೆ, ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿಲ್ಲ.ವಿವಿಧ ಶ್ರೇಣಿಯ ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಯುಕ್ತ ಬಹಳಷ್ಟು ರಸಗೊಬ್ಬರಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಶಿಫಾರಸ್ಸಿನಂತೆ ಹಲವು ಬಗೆಯ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬೇಕು ಎಂದಿದ್ದಾರೆ.
ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿದೆ. ಅಲ್ಲದೆ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಗೆ ಆದ್ಯತೆ ನೀಡದೆ ಡಿಎಪಿ ರಸಗೊಬ್ಬರಕ್ಕೆ ಪರ್‍ಯಾಯವಾಗಿ ಗಂಧಕ ಒದಗಿಸುವ ಮತ್ತು ಇನ್ನಿತರೆ ರಸಗೊಬ್ಬರಗಳನ್ನೂ ಸಹ ಬಳಸಬಹುದು.ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಹಾಗೂ ಆಮ್ಲಜನಕವು ನೈಸರ್ಗಿಕವಾಗಿಯೇ ದೊರೆಯುತ್ತದೆ. ಇನ್ನುಳಿದ 14 ಪೋಷಕಾಂಶಗಳ ಪೈಕಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಕೂಡ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಪ್ರಮಾಣ ಕುಂಠಿತವಾಗುತ್ತದೆ. ಹಾಗಾಗಿ ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಮಡಿ ಸೇರಿದಂತೆ ಸಾವಯವ ಗೊಬ್ಬರ ಬಳಕೆ ಮಾಡುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ.