ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕಿನ ಮುದ್ದೇನಹಳ್ಳಿ ಬಳಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವಕೀಲರ ಸಂಘ ಅರಣ್ಯ ಇಲಾಖೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಗ್ರಾಮ ಪಂಚಾಯಿತಿ ಮುದ್ದೇನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗಾಳಿ ದಿನ ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಹಸಿರು ಮತ್ತು ಸ್ವಚ್ಛ ಚಿಕ್ಕಬಳ್ಳಾಪುರ ಅಭಿಯಾನ ಅಡಿಯಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಾಳಿಯ ಪ್ರಾಮುಖ್ಯತೆ ಅರಿಯಿರಿಪ್ರತಿಯೊಬ್ಬರಲ್ಲೂ ಪರಿಸರ ಜಾಗೃತಿ ಮೂಡಿಸಿ ಹಸಿರು ಮತ್ತು ಸ್ವಚ್ಛತೆಗೆ ಹೆಚ್ಚು ಮಹತ್ವ ತಿಳಿಸಬೇಕು. ವರ್ಲ್ಡ್ ವಿಂಡ್ ಡೇ ಅಥವಾ ಗ್ಲೋಬಲ್ ವಿಂಡ್ ಡೇ ಎಂಬುದು ಜೂನ್ 15 ರಂದು ಆಚರಿಸಲಾಗುವ ವಾರ್ಷಿಕ ಕಾರ್ಯಕ್ರಮ. ಗಾಳಿಯ ಪ್ರಾಮುಖ್ಯತೆ ಮತ್ತು ಅದರ ಮಹತ್ವವನ್ನು ಪ್ರತಿಯೊಬ್ಬರೂ ತಿಳಿಯುವ ನಿಟ್ಟಿನಲ್ಲಿ ಆಯಾ ದಿನಗಳಲ್ಲಿ ಬರುವ ವಿಶೇಷ ಕಾರ್ಯಕ್ರಮಗಳ ಮಹತ್ವವನ್ನು ಪ್ರತಿಯೊಬ್ಬರೂ ತಿಳಿಯಬೇಕು ಎಂದು ಹೇಳಿದರು.
ನಾವು ಇಂದು ನೆಟ್ಟ ಗಿಡವನ್ನು ಪೋಷಣೆ ಮಾಡುವ ಗುರುತರ ಜವಾಬ್ದಾರಿಯನ್ನು ವಹಿಸಿ ಕೊಂಡು ನೋಡಿದಾಗ ಆ ಗಿಡ ದೊಡ್ಡ ಮರವಾಗಿ ಬಹುಕಾಲ ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಕಾಲಕಾಲಕ್ಕೆ ಮಳೆ ಹಾಗೂ ಪರಿಸರದ ಸ್ವಚ್ಛಂದತೆ ನೀಡಲಿದೆ. ಕೇವಲ ಕಾಟಾಚಾರಕ್ಕೆ ಎಂಬಂತೆ ಇಂತಹ ಕಾರ್ಯಕ್ರಮಗಳು ನಡೆಯಬಾರದು ಬದಲಿಗೆ ಜವಾಬ್ದಾರಿಯಿಂದ ಮುಂದಾಲೋಚನೆ ಇಟ್ಟು ಈ ಕೆಲಸಗಳನ್ನ ಮಾಡಬೇಕು ಎಂದು ಹೇಳಿದರು.
ಸಮಾಜಕ್ಕೆ ಪೂರಕವಾಗಿರಲಿ
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆ ಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಕೆ.ಉಮೇಶ್ , ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್.ರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್ , ಪ್ರಧಾನ ಕಾರ್ಯದರ್ಶಿ ಮುರಳಿ ಮೋಹನ್, ನ್ಯಾಯವಾದಿಗಳಾದ ಮಂಜುನಾಥ್ ಗೌಡ ಸೌಜನ್ಯ ಗಾಂಧಿ ಮತ್ತಿತರರು ಇದ್ದರು.