ಕುರುಗೋಡು: ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜತೆಗೆ ಬಾಲ್ಯವಿವಾಹದಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.
ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದ ಕಂಪ್ಲಿ ಮತ್ತು ಕುರುಗೋಡು ಪಟ್ಟಣಗಳಲ್ಲಿ ಬಾಲಕರ ವಸತಿ ನಿಲಯಗಳು ಮಾತ್ರ ಇವೆ. ಮುಂದಿನ ದಿನಗಳಲ್ಲಿ ಬಾಲಕಿಯರ ವಸತಿ ನಿಲಯ ಮತ್ತು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಬೈಲೂರು ಗ್ರಾಮದ ಬಳಿ ₹೪೪ ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ತಾಲೂಕಿನ ನಾಲ್ಕು ಕಡೆ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ ಮಾತನಾಡಿ, ವೇತನ ಪಡೆಯುವ ಉದ್ದೇಶ ದಿಂದ ಶಿಕ್ಷಕ ವೃತ್ತಿಯಲ್ಲಿರುವುದಕ್ಕಿಂತ ಗುಣಮಟ್ಟದ ಶಿಕ್ಷಣ ನೀಡಿ ಭವ್ಯಭಾರತದ ಉತ್ತಮ ಪ್ರಜೆಗಳನ್ನು ತಯಾರಿಸುವ ಕ್ರಿಯಾಶೀಲ ಶಿಕ್ಷಕರಾಗಿ ಎಂದು ಸಲಹೆ ನೀಡಿದರು.ಕೊಟ್ಟೂರುಸ್ವಾಮಿ ವಿರಕ್ತ ಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು ಮಾತನಾಡಿದರು.
ಬಿಇಒ ಟಿ.ಎಂ. ಸಿದ್ದಲಿ೦ಗಮೂರ್ತಿ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕಿನ ವಿವಿಧ ಶಾಲೆಗಳ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಸ್. ಮನೋಹರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುಂಡಪ್ಪ ನಾಗರಾಜ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾವi ಗೊರವ, ಮತ್ತು ಗೌರವಾದ್ಯಕ್ಷ ಕೆ.ಸಣ್ಣ ಮಾರೆಪ್ಪ ಇದ್ದರು.