ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jun 13, 2025, 05:43 AM IST
12ಕೆಪಿಎಲ್24 ಕೊಪ್ಪಳ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣ  ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ಸಂಬಂಧಪಟ್ಟು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ.

ಕೊಪ್ಪಳ:

ಸಮಾಜದ ಅನಿಷ್ಟ ಪದ್ಧತಿಯಾದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಕುರಿತು ಜನರಿಗೆ ತಿಳಿ ಹೇಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ಸಂಬಂಧಪಟ್ಟು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಮಾತನಾಡಿ, ಉಚಿತ ಕಡ್ಡಾಯ ಶಿಕ್ಷಣ ಸೌಲಭ್ಯಗಳಿದ್ದರೂ ಜಿಲ್ಲೆಯಲ್ಲಿ ಬಾಲಕಾರ್ಮಿಕರು ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡುಬರುತ್ತಿವೆ. ಬಾಲ ಕಾರ್ಮಿಕರ ನಿರ್ಮೂಲನೆ ಕೇವಲ ಒಂದು ಇಲಾಖೆ ಕೆಲಸ ಮಾಡಿದರೆ ಸಾಲದು, ಇತರ ವಿವಿಧ ಇಲಾಖೆಗಳು, ಪಿಡಿಒರಿಂದ ಹಿಡಿದು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರ ಮೇಲೆಯೂ ಜವಾಬ್ದಾರಿ ಇದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ ಅವರು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ- 2025ರ ಪ್ರಮಾಣ ವಚನ ಬೋಧಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲ ಕಾರ್ಮಿಕ ಮಕ್ಕಳಿಗೆ ಬಾಂಡ್‌ಗಳನ್ನು ವಿತರಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟೆಪ್ಪನವರ, ಮಕ್ಕಳ ರಕ್ಷಣಾ ಯೋಜನೆ- ಯುನಿಸೆಫ್ ಕೊಪ್ಪಳದ ಸಂಯೋಜಕ ಹರೀಶ್ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ್ ಜಿ., ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕಿ ಮಂಜುಳಾ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ