ಜನಸಂಖ್ಯಾ ನಿಯಂತ್ರಣ ವಿಧಾನದ ಅರಿವು ಮೂಡಿಸಿ: ಡಾ. ಶಿವಾನಂದ

KannadaprabhaNewsNetwork |  
Published : Jul 12, 2024, 01:38 AM IST
ಕಾರವಾರದಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಕಾರವಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರವಾರ: ದೇಶದಲ್ಲಿ ಪ್ರತಿದಿನ ಜನಸಂಖ್ಯೆ ಏರಿಕೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ. ಜನಸಂಖ್ಯಾ ನಿಯಂತ್ರಿಸುವ ಕಾರ್ಯವನ್ನು ಮಾಡಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಕುಡ್ತರಕರ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರು ಹಾಗೂ ಆಶಾ ಕಾರ್ಯಕರ್ತೆಯರು ಕೇವಲ ಹಣಕ್ಕಾಗಿ ತಮ್ಮ ಕರ್ತವ್ಯ ನಿರ್ವಹಿಸುವುದಿಲ್ಲ. ಜನರ ಸೇವೆಯನ್ನು ಮಾಡಲು ದೇವರು ನಮಗೆ ನೀಡಿರುವ ಅವಕಾಶ ಎಂದು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಡಾ. ಅನ್ನಪೂರ್ಣ ವಸ್ತ್ರದ ಪ್ರಾಸ್ತಾವಿಕವಾಗಿ ಮಾತನಾಡಿ, ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ, ಕುಟುಂಬ ಯೋಜನೆ ಅಳವಡಿಕೆಯ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ ಎಂಬ ಘೋಷವಾಕ್ಯದೊಂದಿಗೆ ಸಮುದಾಯ ಜಾಗೃತೀಕರಣ ಪಾಕ್ಷಿಕ ಜೂ. 27ರಿಂದ ಜು. 10ರ ವರೆಗೆ ಹಾಗೂ ಸೇವಾ ಪಾಕ್ಷಿಕ ಜು. 1ರಿಂದ ಜು. 24ರ ವರೆಗೆ ಆಚರಿಸಲಾಗುತ್ತಿದೆ ಎಂದರು.

ಕುಟುಂಬ ಯೋಜನೆಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಮಹಿಳೆಯರಿಗೆ ತಾತ್ಕಾಲಿಕ ಗರ್ಭ ನಿರೋಧಕ ಮಾತ್ರೆಗಳು, ಪಿಪಿಐಯುಸಿಡಿ, ಪಿಎಐಯುಸಿಡಿ, ಛಾಯಾ ಹಾಗೂ ಅಂತರ ಚುಚ್ಚುಮದ್ದುಗಳಿವೆ. ಪುರುಷರಿಗಾಗಿ ನಿರೋಧಗಳಿವೆ. ಈ ವಿಧಾನಗಳನ್ನು ಅನುಸರಿಸುವುದರಿಂದ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಜನನದ 3 ವರ್ಷ ಅಂತರವನ್ನು ಕಾಪಾಡಿಕೊಳ್ಳಬಹುದು. ಶಾಶ್ವತ ವಿಧಾನದಲ್ಲಿ ಮಹಿಳೆಯರಿಗಾಗಿ ಲ್ಯಾಪ್ರೋಸ್ಕೋಫಿಕ್ ಮತ್ತು ಟ್ಯೂಬೆಕ್ಟೋಮಿ ಎಂಬ ಎರಡು ವಿಧಾನಗಳಿವೆ. ಪುರುಷರಿಗಾಗಿ ನೋಸ್ಮಾರೈಲ್ ವ್ಯಾಸೆಕ್ಟೋಮಿ ವಿಧಾನಗಳಿವೆ. ಎರಡು ಮಕ್ಕಳ ನಂತರ ಶಾಶ್ವತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಜನಸಂಖ್ಯಾ ಸ್ಫೋಟದಿಂದ ಆಗುವ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದರು.

ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಚಿಕಿತ್ಸೆಯಲ್ಲಿ ಹೆಚ್ಚಿನ ಸಾಧನೆಗೈದ ಪ್ರಾಥಮಿಕ ಹಾಗೂ ಆಶಾ ಕಾರ್ಯಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ಜನಸಂಖ್ಯೆ ನಿಯಂತ್ರಣ ದಿನಾಚರಣೆ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕ್ಕನವರ, ಡಿಪಿಸಿ ಬಸವರಾಜ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಶಂಕರ ರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರ್ಷ, ತಾಲೂಕು ಆರೋಗ್ಯಾಧಿಕಾರಿ ಡಾ. ಸುರಜಾ ನಾಯಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ