ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jul 19, 2025, 01:00 AM IST
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ  ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆ ಬಗ್ಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆ ಬಗ್ಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸಬೇಕು ಎಂದು ಸೂಚನೆ ನೀಡಿದರು.ಬಾಲ್ಯವಿವಾಹಗಳನ್ನು ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದೆ. ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಸಂಬಂಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದೆ. ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಸಲಹೆ ನೀಡಿದರು.ಈ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿ.ಪಂ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ