ಮತ ಕಳ್ಳತನ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ

KannadaprabhaNewsNetwork |  
Published : Oct 22, 2025, 01:03 AM IST
ಓಟ್ ಚೋರ್, ಗದ್ದಿ ಛೋಡ್ ಘೋಷಣೆ ಬಗ್ಗೆ ಜಾಗೃತಿ ಮೂಡಿಸಿ-ಶಾಸಕ | Kannada Prabha

ಸಾರಾಂಶ

ಮತಗಳ್ಳತನ ಬಿಜೆಪಿ ನಡೆಸಿರುವ ಗೆಲುವಿನ ಹುನ್ನಾರವಾಗಿದೆ. ರಾಷ್ಟ್ರದೆಲ್ಲೆಡೆ ಮತಗಳ್ಳತನದಿಂದ ಅಧಿಕಾರಿ ಹಿಡಿದಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ, ಯಳಂದೂರು

ಮತಗಳ್ಳತನ ಬಿಜೆಪಿ ನಡೆಸಿರುವ ಗೆಲುವಿನ ಹುನ್ನಾರವಾಗಿದೆ. ರಾಷ್ಟ್ರದೆಲ್ಲೆಡೆ ಮತಗಳ್ಳತನದಿಂದ ಅಧಿಕಾರಿ ಹಿಡಿದಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಕರೆ ನೀಡಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲ ಸೂಚಿಸಿ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕ, ಉತ್ತರ ಪ್ರದೇಶ, ಹರಿಯಾಣ, ಗುಜರಾತ್ ಸೇರಿದಂತೆ ಹಲವೆಡೆ ಮತಗಳ್ಳತನ ನಡೆದಿದೆ. ಈ ಬಗ್ಗೆ ನಮ್ಮ ರಾಹುಲ್‌ ಗಾಂಧಿ ಸಾಕ್ಷಿ ಸಮೇತ ಇದನ್ನು ಸಾಬೀತು ಪಡಿಸಿದ್ದಾರೆ. ನಂತರ ಎಚ್ಚೆತ್ತುಕೊಂಡಿರುವ ಚುನಾವಣಾ ಆಯೋಗ ಮತದಾರರ ಖಾತ್ರಿಯನ್ನು ಸರಿಪಡಿಸಿಕೊಳ್ಳಲು ಮುಂದಾಗಿರುವುದು ಇದಕ್ಕೆ ಒಟಿಪಿ ಮೂಲಕವೇ ದೃಢೀಕರಿಸುವ ಕೆಲಸವು ಸ್ವಾಗತಾರ್ಹವಾಗಿದೆ.

ಕಳ್ಳತನದಿಂದ ಅಧಿಕಾರವನ್ನು ಹಿಡಿಯುವುದು ಸಂವಿಧಾನ ವಿರೋಧಿ ನಡಿಗೆಯಾಗಿದೆ. ಹಾಗಾಗಿ ಮತಗಳ್ಳತನ ಮಾಡಿದವರು, ಅಧಿಕಾರದ ಗದ್ದುಗೆಯನ್ನು ಬಿಡಿ ಎಂಬ ಘೋಷ ವಾಕ್ಯ ಎಲ್ಲೆಡೆ ರಾರಾಜಿಸಬೇಕಿದೆ. ಇದಕ್ಕೆ ಬೆಂಬಲಕ್ಕಾಗಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷದ ಬೂತ್‌ಮಟ್ಟದ ಕಾರ್ಯಕರ್ತರು ಈ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಮತಗಳ್ಳತನ ನಮ್ಮ ರಾಜ್ಯದ ಮಹದೇವಪುರ ಕ್ಷೇತ್ರ ಹಾಗೂ ಅಳಂದ ಕ್ಷೇತ್ರದಲ್ಲಾಗಿರುವುದು ಖಾತ್ರಿಯಾಗಿದೆ. ನಮ್ಮ ಜಿಲ್ಲೆಯಿಂದ ೧ ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ೨೫ ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹವನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೨೩೬ ಬೂತ್‌ಗಳಲ್ಲೂ ಒಂದು ಬೂತ್‌ಗೆ ೧೦೦ ರಿಂದ ೧೫೦ ಜನರಿಂದ ಸಹಿ ಸಂಗ್ರಹಿಸುವ ಗುರಿ ಇದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಚ್.ಸಿ. ಬಸವರಾಜು, ಬ್ಲಾಕ್ ಕಾಂಗ್ರೆಸ್ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿದರು. ಜಿಲ್ಲಾ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ವಡರೆಗೆದಾಸ್, ಚಾಮುಲ್ ನಿರ್ದೇಶಕ ಕಮರವಾಡಿರೇವಣ್ಣ, ಪಪಂ ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಬಿ. ರವಿ, ಲಿಂಗರಾಜಮೂರ್ತಿ, ಮುನವ್ವರ್‌ಬೇಗ್, ಶ್ರೀಕಂಠಸ್ವಾಮಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಬಡಗಲಮೋಳೆ ಚೇತನ್, ಜಯರಾಮ್, ಮಲ್ಲು, ರಾಜಣ್ಣ ಇದ್ದರು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ