ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಕಜೆಮಾರು ಕೆದಂಬಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಶುಕ್ರವಾರ ವಿಚಾರ ಸಂಕಿರಣ ಹಾಗೂ ಪುಸ್ತಕ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಇಂದಿನ ಯುವಜನತೆಗೆ ಗಾಂಧೀ ವಿಚಾರಧಾರೆಯ ಪ್ರಸ್ತುತತೆ’ ಬಗ್ಗೆ ವಿಷಯ ಮಂಡಿಸಿದ ಅವರು, ಸ್ವಾತಂತ್ರ್ಯ ನಂತರದ 78 ವರ್ಷಗಳಲ್ಲಿ ರಾಜಕೀಯ ವ್ಯವಸ್ಥೆಯು ನಮ್ಮ ಸಮಾಜವನ್ನು ಮತ್ತೆ ಜಾತಿ, ಧರ್ಮ, ದ್ವೇಷ ಮತ್ತು ಮೂಲಭೂತವಾದದ ಮೂಲಕ ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಇಂತಹ ಸಮಾಜವನ್ನು ವಿಭಜಿಸುವ ಮನಸ್ಥಿತಿಯವರು ದೇಶದ್ರೋಹಿಗಳು. ಅವರು ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದವರು. ಭಾಷೆ, ಜಾತಿ, ಲಿಂಗ, ಧರ್ಮದ ಆಧಾರದಲ್ಲಿ ನಡೆಯುತ್ತಿರುವ ದ್ವೇಷದ ವಿರುದ್ಧ ಪ್ರೀತಿ, ಭಾತೃತ್ವ ಹಾಗೂ ಒಗ್ಗಟ್ಟಿನ ಮೂಲಕ ಉತ್ತರ ನೀಡಬೇಕಾಗಿದೆ. ನಮ್ಮ ಪೂರ್ವಜರು ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ ಬಲಿದಾನದ ಮಹತ್ವವನ್ನು ನಾವು ಎತ್ತಿ ಹಿಡಿಯಬೇಕು. ಈ ನಿಟ್ಟಿನಲ್ಲಿ ಗಾಂಧಿಯ ಪ್ರಸ್ತುತತೆಯನ್ನು ಯುವಕರು ಅರಿಯಬೇಕು ಎಂದು ಹೇಳಿದರು.ಸಾಮಾಜಿಕ ಜೀವನದಲ್ಲಿ ಇಲ್ಲದವರನ್ನು ಇಂದು ನಾವು ಮತ್ತೆ ಮತ್ತೆ ಅಧಿಕಾರಕ್ಕೇರಿಸುತ್ತಿದ್ದೇವೆ. ಈ ಮೂಲಕ ಮತದಾನ ಮೌಲ್ಯವು ಕುಸಿಯುತ್ತಿದೆ. ಸಂವಿಧಾನ ವಿರೋಧಿ ಕಾನೂನುಗಳು ದೇಶದ ಸಂಸತ್ತಿನಲ್ಲಿ ಚರ್ಚೆ ರಹಿತವಾಗಿ ಮಂಜೂರಾಗುತ್ತಿವೆ. ಸರಕಾರಿ ಅಧಿಕಾರಿಗಳು ಆರೆಸ್ಸೆಸ್ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇದು ಸಂವಿಧಾನವನ್ನು ಬದಲಿಸಿ, ಕೇವಲ ಹಿಂದೂ ರಾಷ್ಟ್ರ ಮಾತ್ರವಲ್ಲ, ಜಾತಿ ಆಧಾರಿತ ಹಿಂದೂ ರಾಷ್ಷ್ರ ನಿರ್ಮಾಣದ ತಂತ್ರದ ಆರೆಸೆಸ್ ಭಾಗವಾಗಿದ್ದು, ಇದನ್ನು ಯುವ ಸಮುದಾಯ ಅರಿಯಬೇಕಾಗಿದೆ ಎಂದವರು ಹೇಳಿದರು.
ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನದ ಸಂಸ್ಥಾಪಕ ಪ್ರಮೋದ್ ಕುಮಾರ್ ರೈ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಇದ್ದರು.ಮಂಗಳೂರು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶೇಷಪ್ಪ ವಂದಿಸಿದರು. ಆರ್‌ಜೆ ಅಭಿಷೇಕ್ ನಿರೂಪಿಸಿದರು.ಗಾಂಧಿ ಸ್ಮೃತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಅತಿಥಿಗಳಿಗೆ ತುಳುನಾಡ ಸಂಪ್ರದಾಯದಂತೆ ವೀಳ್ಯದೆಲೆ, ಅಡಕೆ, ಖಾದಿ ಶಾಲು ಹಾಗೂ ಚರಕವನ್ನು ನೀಡಿ ಗೌರವಿಸಲಾಯಿತು. ಬಾಕ್ಸ್...
ಕ್ವೋಟ್----ಮೂರು ಭಾರಿ ಗಾಂಧೀಜಿ ಭೇಟಿ ನೀಡಿರುವ ಮಂಗಳೂರಿನಲ್ಲಿಯೂ ಇಂದು ಮೂಲಭೂತವಾದ ವಿಜೃಂಭಿಸುತ್ತಿದೆ. ಗಾಂಧಿಯನ್ನು ಹತ್ಯೆ ಮಾಡಿದವರ ಸಿದ್ಧಾಂತಗಳು ಇಲ್ಲಿ ಮರೆಯುವ ಮೂಲಕ ಗಾಂಧಿ ಸಂದೇಶಗಳು ಮರೆಯಾಗಿರುವುದು ನಾಚಿಕೆಗೇಡಿನ ವಿಚಾರ.
---------------------