ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ರಾಘವೇಂದ್ರ ಕಾಲೋನಿಯ ರುಡ್‌ಸೆಟ್ ಸಂಸ್ಥೆಯಲ್ಲಿ ಜು.30ರ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ, ಜಾಗೃತಿ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಂತೋಷಕುಮಾರ ಮಾತನಾಡಿ, ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಯುವಜನತೆ ಮತ್ತು ಮಕ್ಕಳು ಸೈಬರ್ ಕ್ರೈಂ ಹಾಗೂ ವಂಚನೆಗಳಿಗೆ ಒಳಗಾಗುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ಸೂಕ್ತ ನಿಗಾ ವಹಿಸಿ, ಅವರು ಯಾವುದೇ ತೊಂದರೆಗೆ ಸಿಲುಕದಂತೆ ನೋಡಿಕೊಳ್ಳಬೇಕು ಎಂದರು. ಸ್ಪಂದನಾ ಸ್ವಯಂಸೇವಾ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ ದೇಶಪಾಂಡೆ ಮಾತನಾಡಿದರು. ಯಶೋದಾ ಜೋಶಿ ಪ್ರಾರ್ಥಿಸಿದರು. ಜಿಲ್ಲಾ ನಿರೂಪಣಾಧಿಕಾರಿ ನಿರ್ಮಲಾ ಸುರಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಿತಾ ಬಿರಾದಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಮಿಷನ್ ಶಕ್ತಿ ಜಿಲ್ಲಾ ಸಂಯೋಜಕಿ ಭಾರತಿ ಪಾಟೀಲ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ ವಂದಿಸಿದರು. ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಿಷನ್ ಶಕ್ತಿ, ಜಿಲ್ಲಾ ಕಚೇರಿ ಸಿಬ್ಬಂದಿ, ಅಂಗನವಾಡಿ ಹಿರಿಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಶಕ್ತಿ ಸದನ ಸಿಬ್ಬಂದಿ, ಸಾಂತ್ವನ ಕೇಂದ್ರದ ಮುಖ್ಯಸ್ಥರು, ಆಪ್ತ ಸಮಾಲೋಚಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ ಉಪಸ್ಥಿತರಿದ್ದರು.